ಮಂಡ್ಯ | ಮೇಲುಕೋಟೆ ಬಳಿ ಹೆಣ್ಣು ಶಿಶುವಿನ ಮೃತದೇಹ ಪತ್ತೆ

Date:

Advertisements

ಪ್ರಸ್ತೂತಿ ಪೂರ್ವ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಪ್ರಕರಣ ರಾಜ್ಯದ ಗಮನ ನಡೆಸಿದೆ. ಹಲಾವರು ಪ್ರತಿಭಟನೆಗಳು ನಡೆಯುತ್ತಿವೆ. ಇದೂವರೆಗೂ ಒಂಬತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೆಲ್ಲದರ ನಡುವೆ, ಮಂಡ್ಯ ಜಿಲ್ಲೆಯ ಮೇಲುಕೋಟೆ ಬಳಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.

ಮೇಲುಕೋಟೆ ಬಳಿಯ ದಳವಾಯಿ ಕೆರೆಯಲ್ಲಿ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ. ಕವರ್‌ನಲ್ಲಿ ಸುತ್ತಿ ಇಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಮಗು ಜನಿಸಿ ಎರಡು ದಿನಗಳಷ್ಟೇ ಆಗಿರಬಹುದು ಎಂದು ಹೇಳಲಾಗಿದೆ.

ಮಗು ಸಹಜವಾಗಿ ಸಾವನ್ನಪ್ಪಿದೆಯೇ ಅಥವಾ ಹೆಣ್ಣು ಎಂಬ ಕಾರಣದಿಂದಾಗಿ ಕೊಲ್ಲಲಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಮೇಲುಕೋಟೆ ಪೊಲೀಸರು ಸ್ಥಳಕ್ಎಕ ಬಂದು ಪರಿಶೀಲನೆ ನಡೆಸಿದ್ದಾರೆ. ಮಗುವಿನ ಪೋಷಕರ ಪತ್ತೆಗೆ ಯತ್ನಿಸುತ್ತಿದ್ದಾರೆ.

Advertisements

ಇತ್ತೀಚೆಗೆ ಪ್ರಸೂತಿ ಪೂರ್ವ ಲಿಂಗ ಪತ್ತೆ ಮತ್ತು ಭೂತ್ರ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಮೂಲದ ಆರೋಪಿಗಳು ಮಂಡ್ಯದ ಆಲೆಮನೆಯೊಂದರಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ, ಹೆಣ್ಣು ಭ್ರೂಣಗಳನ್ನು ಕೊಲ್ಲುತ್ತಿದ್ದರು. ಪ್ರಕರಣದ ಬೆನ್ನತ್ತಿದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಇದೂವರೆಗೆ ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಕಳೆದ ಒಂದೂವರೆ ವರ್ಷದಲ್ಲಿ 900 ಹೆಣ್ಣು ಭ್ರೂಣ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇದೀಗ, ಹೆಣ್ಣು ಶಿಶುವಿನ ಮೃತದೇಹವೊಂದು ಮೇಲುಕೋಟೆ ಬಳಿ ಪತ್ತೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X