ಬೆಂಗಳೂರು | ಪೊಲೀಸರನ್ನು ಆಟವಾಡಿಸಲು ರಾಜಭವನಕ್ಕೆ ಬಾಂಬ್‌ ಬೆದರಿಕೆ: ಬಂಧನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಜಭವನದಲ್ಲಿ ಬಾಂಬ್‌ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇದೀಗ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಭಾಸ್ಕರ್ ಬಂಧಿತ ಆರೋಪಿ. ಈತ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿ ಗ್ರಾಮದವನು. ಬಿ.ಕಾಂ ಪದವೀಧರನಾದ ಈತ ಬಾಂಬ್‌ ಬೆದರಿಕೆ ಕರೆ ಮಾಡಿ ಬಂಧನ ಭೀತಿಯಿಂದ ಆಂಧ್ರಪ್ರದೇಶದ ಚಿತ್ತೂರಿಗೆ ಪರಾರಿಯಾಗಿದ್ದನು. ಆತನ ಮೊಬೈಲ್ಕರೆಗಳ ಜಾಡು ಹಿಡಿದ ಪೊಲೀಸರು ಆತನನ್ನು ಚಿತ್ತೂರಿನಲ್ಲಿ ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ.

ಪೊಲೀಸರು ಈತನನ್ನು ಬಂಧಿಸಿ, ವಿಚಾರಣೆ ನಡೆಸುವ ವೇಳೆ ಈತ ಆಘಾತಕಾರಿ ವಿಷಯವೊಂದನ್ನು ಹೇಳಿಕೊಂಡಿದ್ದಾನೆ. ಏನೆಂದರೆ, ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಬಂದಿದ್ದು ಹಾಗೂ ಪೊಲೀಸರು ತೀವ್ರ ತನಿಖೆ ನಡೆಸುತ್ತಿರುವ ಸುದ್ದಿ ತಿಳಿದಿದ್ದ ಈತ ವೈಯಕ್ತಿಕ ಕೆಲಸದ ನಿಮಿತ್ತ ಸೋಮವಾರ ಬಸ್ನಲ್ಲಿ ಬೆಂಗಳೂರಿಗೆ ಬಂದಿದ್ದನು. ಕಾರ್ಪೊರೇಷನ್ವೃತ್ತದಲ್ಲಿ ಇಳಿದು ರಾಜಭವನದತ್ತ ನಡೆದುಕೊಂಡು ಹೋಗಿದ್ದನು.

Advertisements

ವೇಳೆ, ಬೆಂಗಳೂರು ಪೊಲೀಸರನ್ನು ಆಟವಾಡಿಸಬೇಕೆಂದು ನಿರ್ಧಾರ ಮಾಡಿ, ಗೂಗಲ್‌ನಲ್ಲಿ ಎನ್‌ಐಎ ನಂಬರ್‌ ಸರ್ಚ್ ಮಾಡಿ ಪಡೆದುಕೊಂಡಿದ್ದಾನೆ.

ಅಜ್ಞಾತ ಸ್ಥಳದಿಂದ ಸೋಮವಾರ ರಾತ್ರಿ 11.30 ಸುಮಾರಿಗೆ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ದೊಮ್ಮಲೂರಿನ ನಿಯಂತ್ರಣ ಕೊಠಡಿಗೆ ಕರೆ ಮಾಡಿ ರಾಜಭವನದಲ್ಲಿ ಬಾಂಬ್ಇಟ್ಟಿದ್ದೇವೆ. ಕೆಲವೇ ಕ್ಷಣದಲ್ಲಿ ಅದು ಸ್ಫೋಟಗೊಳ್ಳಲಿದೆಎಂದು ಬೆದರಿಕೆ ಹಾಕಿದ್ದಾನೆ. ಬೆದರಿಕೆ ಕರೆಯಿಂದ ಗಾಬರಿಯಾದ ಎನ್ಐಎ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಂತರ 12 ಗಂಟೆ ಸುಮಾರಿಗೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಧಾವಿಸಿ ರಾಜಭವನದ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಸಂದರ್ಭದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ದೊರೆತಿಲ್ಲ. ಹೀಗಾಗಿ, ಇದೊಂದು ಹುಸಿ ಬಾಂಬ್ ಕರೆ ಎಂಬುದು ತಿಳಿದುಬಂದಿತ್ತು.

ಈ ಸುದ್ದಿ ಓದಿದ್ದೀರಾ? ಡಿಸೆಂಬರ್ 14 ರಿಂದ 22 ರವರೆಗೆ ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು

ಬೆಂಗಳೂರಿನಿಂದ ಆಂಧ್ರದ ಚಿತ್ತೂರಿನ ದೇವಸ್ಥಾನವೊಂದಕ್ಕೆ ತೆರಳಿದ್ದ ಆರೋಪಿಯ ಫೋನ್ ನಂಬರ್‌ ನೆಟ್ವರ್ಕ್ ಟ್ರ್ಯಾಕ್ ಮಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X