ಸಂಸತ್‌ನೊಳಗೆ ದಾಳಿ | ಸಂಸದ ಪ್ರತಾಪ್‌ ಸಿಂಹರನ್ನು ವಿಚಾರಣೆಗೆ ಒಳಪಡಿಸಿ: ಸಿದ್ದರಾಮಯ್ಯ

Date:

Advertisements
  • ಸಂಸತ್ ಭವನದೊಳಗೆ ನಡೆದ ದಾಳಿ ಖಂಡಿಸಿದ ಸಿಎಂ ಸಿದ್ದರಾಮಯ್ಯ
  • ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ ಕರ್ತವ್ಯ: ಸಿದ್ದರಾಮಯ್ಯ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ, ಅತ್ಯಂತ ಆಘಾತಕಾರಿಯಾದುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

“ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವರ ಕರ್ತವ್ಯವಾಗಿದೆ” ಎಂದು ಒತ್ತಾಯಿಸಿದ್ದಾರೆ.

Advertisements

“ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ” ಎಂದಿದ್ದಾರೆ.

“ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು” ಎಂದು ಪ್ರಶ್ನಿಸಿದ್ದಾರೆ.

“ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ. ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು?” ಎಂದಿದ್ದಾರೆ.

“ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತಾ ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X