ಸಂಸತ್‌ನೊಳಗೆ ದಾಳಿ | ಗೃಹ ಸಚಿವ ಅಮಿತ್ ಶಾ ಹೊಣೆ ಹೊರಬೇಕು: ಬಿ ಕೆ ಹರಿಪ್ರಸಾದ್

Date:

Advertisements

ಸಂಸತ್‌ ಭವನದೊಳಗೆ ಆಗುಂತಕರಿಂದ ದಾಳಿ ನಡೆದಿದ್ದು, ಲೋಕಸಭೆ ಭದ್ರತಾ ವೈಫಲ್ಯದ ಹೊಣೆಯನ್ನು ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಬಿ ಕೆ‌ ಹರಿಪ್ರಸಾದ್ ಆಗ್ರಹಿಸಿದರು.

ಲೋಕಸಭೆಯಲ್ಲಿ ನಡೆದ ಭದ್ರತಾ ಲೋಪ ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲೂ ಪ್ರತಿಧ್ವನಿಸಿತು. ಈ ವೇಳೆ ಮಾತನಾಡಿದ ಬಿ ಕೆ ಹರಿಪ್ರಸಾದ್‌, “ಘಟನೆಯನ್ನ ನಾನು ಖಂಡಿಸುತ್ತೇನೆ. ಈ‌ ಹಿಂದೆ ಉಗ್ರಗಾಮಿಗಳು ‌ಸಂಸತ್‌ ಭವನದ ಮೇಲೆ ದಾಳಿ‌ ನಡೆಸಿದ್ದರು. ‌ಹುತಾತ್ಮರಿಗೆ ಸಂತಾಪ ಸೂಚಿಸುವ ದಿನವೇ‌ ಈ ಘಟನೆ ನಡೆದಿದೆ. ಹೊಸ‌ ಪಾರ್ಲಿಮೆಂಟ್ ಕಟ್ಟಡ ಕಟ್ಟಿದ್ದಾರೆ. ಆದರೂ‌ ದೇಶದ ಭದ್ರತೆ ಕುಸಿದಿದೆ” ಎಂದರು.

ಶಿವಾಜಿನಗರದ ಕಾಂಗ್ರೆಸ್‌ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, “ಸುಮಾರು 22 ವರ್ಷಗಳ ಹಿಂದೆ ಸಂಸತ್ ಭವನದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಆಗ ಅನೇಕರು ಪ್ರಾಣ ಕಳೆದುಕೊಂಡಿದ್ದರು.‌ ಇದೀಗ 22 ವರ್ಷಗಳ ಬಳಿಕ ಇದೇ ದಿನ ಈ ಘಟನೆ ನಡೆದಿದೆ. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವೈಫಲ್ಯ” ಎಂದು ಟೀಕಿಸಿದರು.

Advertisements

“ಯುವಕರು ಬಳಸಿದ ಪಾಸ್ ಸಂಸದ ಪ್ರತಾಪ್ ಸಿಂಹ ಕಚೇರಿಯದ್ದೇ ಆಗಿದ್ದರೆ ಮೊದಲು ಅವರ ಮೇಲೆ ಪ್ರಕರಣ ದಾಖಲಿಸಬೇಕು. ನಮ್ಮವರು ಪಾಸ್ ಪಡೆದಿದ್ದರೆ ಬಿಜೆಪಿಯವರು ಸುಮ್ಮನೆ ಇರ್ತಿದ್ರಾ” ಎಂದು ಪ್ರಶ್ನಿಸಿದರು.

ಸುವರ್ಣ ಸೌಧದಲ್ಲಿ ಬಿಗಿ ಭದ್ರತೆ

ಲೋಕಸಭೆಯಲ್ಲಿ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ಸೌಧದಲ್ಲಿ ಭದ್ರತೆ ಬಿಗಿಗೊಳಿಸಲಾಗುತ್ತಿದೆ. ಸ್ಪೀಕರ್ ಯುಟಿ ಖಾದರ್ ಸೂಚನೆಯಂತೆ ಸುವರ್ಣ ಸೌಧದ ಒಳಭಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸುವ ಮೂಲಕ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X