ರಾಯಚೂರು ನಗರದ ಸಂತೋಷಿ ಸರೋವರ ಲಾಡ್ಜ್‌ನ ಕೊಠಡಿ ಸಂಖ್ಯೆ 113ರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ.
ಉತ್ತರ ಪ್ರದೇಶ ಮೂಲದ ನಗಲಬಾರಿ ಜಿಲ್ಲೆಯ ಅತ್ರಾಸ್ ಗ್ರಾಮದ ಸೋನಿ(23) ಎಂಬ ಮಹಿಳೆ ಮೃತ ದುರ್ದೈವಿ. ಮೃತ ಮಹಿಳೆ ಮತ್ತು ಆಕೆಯ ಪತಿ ಇಬ್ಬರು ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಘಟನೆಗೆ ನಿಖಿರ ಕಾರಣ ತಿಳಿದುಬಂದಿಲ್ಲ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅನುಚಿತ ವರ್ತನೆ ಆರೋಪದ ಮೇಲೆ ದಲಿತ ಯುವಕನಿಗೆ ಥಳಿತ
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹಾಗೂ ಡಿವೈಎಸ್‌ಪಿ ಸತ್ಯನಾರಾಯಣ ರಾವ್, ಸಿಪಿಐ ನಾಗರಾಜ, ಪಿಎಸ್‌ಐ ಮಂಜುನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನಾ ಸ್ಥಳದಲ್ಲಿದ್ದ ಮೃತ ಸೋನಿ ಪತಿ ಅವಿನಾಶನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.