ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ

Date:

Advertisements

ಕೇಂದ್ರದ ಬಿಜೆಪಿ ನಾಯಕರನ್ನು ಯಡಿಯೂರಪ್ಪನವರು ಬ್ಲಾಕ್ ಮೇಲ್ ಮಾಡಿ ತಮ್ಮ ಮಗನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಏನಿದು ಬ್ಲಾಕ್ ಮೇಲ್? ಈ ಬಗ್ಗೆ ಯಡಿಯೂರಪ್ಪನವರು ಇಂದಿನ ಸಾರ್ವಜನಿಕ ಸಭೆಯಲ್ಲಿ ವಿವರ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“ನಮ್ಮ ಸರ್ಕಾರದ ವಿರುದ್ದ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ದ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸನಗೌಡ ಪಾಟೀಲ ಯತ್ನಾಳ್ ಅವರು ನಿನ್ನೆ ಸದನದ ಒಳಗೆ ಮತ್ತು ಹೊರಗ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದ ಮೇಲೆ ಮಾಡಿರುವ ಆರೋಪಕ್ಕೆ ಉತ್ತರಿಸಲಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

“ಬಿ ವೈ ವಿಜಯೇಂದ್ರ, ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ .ಅಶೋಕ್ ಅವರ ವಿರುದ್ದ ಮಾಡಿರುವ ಆರೋಪಗಳ ಬಗ್ಗೆ ಬಿಜೆಪಿ ನಾಯಕರು ಈ ಪ್ರತಿಭಟನಾ ಸಭೆಯಲ್ಲಿ ಉತ್ತರ ನೀಡಲಿ. ಬಿ.ಎಸ್. ಯಡಿಯೂರಪ್ಪನವರು ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಕಾಣಿಕೆ ನೀಡಿ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹಿಂದೆ ಆರೋಪಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್, ನಿನ್ನೆ ಹೊಸ ಬಾಂಬು ಹಾಕಿದ್ದಾರೆ” ಎಂದಿದ್ದಾರೆ.

Advertisements

“ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಬಿಜೆಪಿ ನಾಯಕ ವಿ.ಸೋಮಣ್ಣನವರನ್ನು ಸೋಲಿಸಲಿಕ್ಕಾಗಿಯೇ ಬೆಂಗಳೂರಿನಿಂದ ಅವರನ್ನು ಓಡಿಸಿ ಮೈಸೂರಿನ ಎರಡು ಕ್ಷೇತ್ರಗಳಲ್ಲಿ ಚುನಾವಣಾ ಸ್ಪರ್ಧಿಸುವಂತೆ ಮಾಡಿ ಸೋಲಿಸಿದ್ದಾರೆ ಎಂದು ಇಲ್ಲಿಯವರೆಗೆ ಆರೋಪಿಸುತ್ತಾ ಬಂದಿರುವ ಯತ್ನಾಳ್ ಅವರು ಈಗ ಬಸವರಾಜ ಬೊಮ್ಮಾಯಿ ಅವರನ್ನೂ ಸೋಲಿಸಲು ಬಿ.ವೈ.ವಿಜಯೇಂದ್ರ ಹಣ ಕೊಟ್ಟು ಕಳಿಸಿದ್ದರು ಎಂದು ಗುರುತರವಾದ ಇನ್ನೊಂದು ಆರೋಪ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಆತ್ಮವಿಶ್ವಾಸದಿಂದ ಮಾತನಾಡಿರುವ ಯತ್ನಾಳ್ ಬೊಮ್ಮಾಯಿ ಅವರನ್ನು ದೇವರ ಮೇಲೆ ಆಣೆಗೆ ಕರೆದಿದ್ದನ್ನು ನೋಡಿದರೆ ಆರೋಪದಲ್ಲಿ ಸತ್ಯಾಂಶ ಇದ್ದ ಹಾಗಿದೆ. ಚುನಾವಣೆಯ ಕಾಲದಲ್ಲಿ ಈ ರೀತಿಯ ಹಣ ಸಂದಾಯ ಮಾಡುವುದು ಕಾನೂನಿನ ದೃಷ್ಟಿಯಿಂದಲೂ ಶಿಕ್ಷಾರ್ಹ ಅಪರಾಧವಾಗಿದೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ದಕ್ಷಿಣದ ಕೆಲವು ನಾಯಕರು ತಮ್ಮಲ್ಲಿರುವ ಹಣದ ಬಲದಿಂದ ಅಧಿಕಾರದ ಸ್ಥಾನಗಳನ್ನು ಪಡೆಯುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಆರ್. ಅಶೋಕ್ ಅವರ ಬಗ್ಗೆಯೂ ಅನುಮಾನ ಹುಟ್ಟಿಸುವಂತೆ ಮಾಡಿದ್ದಾರೆ” ಎಂದಿದ್ದಾರೆ.

“ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿರಂತರವಾಗಿ ತಮ್ಮ ಪಕ್ಷದವರ ವಿರುದ್ದವೇ ಮಾಡಿಕೊಂಡು ಬಂದಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿದೆ. ಇದಕ್ಕೆ ಉತ್ತರ ನೀಡಬೇಕಾಗಿರುವುದು ರಾಜ್ಯ ಬಿಜೆಪಿ ನಾಯಕರ ಕರ್ತವ್ಯವಾಗಿದೆ. ಇದನ್ನು ತಿಳಿದುಕೊಳ್ಳುವ ಹಕ್ಕು ರಾಜ್ಯದ ಜನತೆಗಿದೆ” ಎಂದು ಒತ್ತಾಯಿಸಿದ್ದಾರೆ.

“ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ಮಾಡಬೇಕಾಗಿರುವುದು ಬೆಳಗಾವಿಯಲ್ಲಿ ಅಲ್ಲ, ಈ ನಾಯಕರು ಮೊದಲು ಇವರದ್ದೇ ಪಕ್ಷದ 25 ಸಂಸದರನ್ನು ದೆಹಲಿಗೆ ಕಳಿಸಿ ಬರಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆಮಾಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಯವರ ಮನೆ ಮುಂದೆ ಧರಣಿ ನಡೆಸುವಂತೆ ಮಾಡಲಿ. ಅವರಿಗೇನಾದರೂ ಪ್ರಧಾನಿ ಬಗ್ಗೆ ಅಂಜಿಕೆ ಇದ್ದರೆ ಅವರ ದನಿಗೆ ದನಿಗೂಡಿಸಲು ನನ್ನ ಸಂಪುಟದ ಸದಸ್ಯರ ಜೊತೆ ನಾನು ಅವರ ಜೊತೆ ಸೇರಿಕೊಳ್ಳುತ್ತೇನೆ. ಸುಮ್ಮನೆ ಇಲ್ಲಿ ಪ್ರಚಾರಕ್ಕಾಗಿ ಕೂಗಾಡಿದರೆ ಏನೂ ಪ್ರಯೋಜನವಾಗದು” ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

“ರಾಜ್ಯದ ಬಿಜೆಪಿ ನಾಯಕರ ದಮ್ಮು ತಾಕತ್ ಎಲ್ಲವೂ ಮೊನ್ನೆ ಸದನದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಯಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚೆ ನಡೆಯಬೇಕಾಗಿದ್ದ ಸಮಯವನ್ನು ಅನಗತ್ಯವಾದ ಪ್ರತಿಭಟನೆಯ ಮೂಲಕ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಪೋಲು ಮಾಡಿದ್ದಾರೆ. ಉತ್ತರ ಕರ್ನಾಟಕದ ಬಗ್ಗೆ ಪ್ರೀತಿ-ಕಾಳಜಿ ಇದ್ದಿದ್ದರೆ ಇಂತಹ ಮೂರ್ಖತನದ ಕೆಲಸವನ್ನು ಮಾಡುತ್ತಿರಲಿಲ್ಲ. ಇಂತಹವರಿಗೆ ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವ ಯಾವ ಹಕ್ಕಿದೆ” ಎಂದು ಪ್ರಶ್ನಿಸಿದ್ದಾರೆ.

“ಹೊಸ ವಿಧಾನಸಭೆ ರಚನೆಗೊಂಡು 150 ದಿನಗಳಾಗುವ ವರೆಗೆ ವಿರೋಧಪಕ್ಷದ ನಾಯಕನನ್ನು ಮಾಡುವ ಯೋಗ್ಯತೆ ಬಿಜೆಪಿಗೆ ಇಲ್ಲ. ಈಗಲೂ ವಿವಾದ ಬಗೆಹರಿದಿಲ್ಲ. ವಿರೋಧ ಪಕ್ಷದ ನಾಯಕರಾಗಿ ಆರ್. ಅಶೋಕ್ ಅವರನ್ನಾಗಲಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನಾಗಲಿ ಬಹುಸಂಖ್ಯೆಯ ಬಿಜೆಪಿಯ ಶಾಸಕರು ಒಪ್ಪಿಕೊಂಡಿಲ್ಲ. ತಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿರುವಾಗ ನಮ್ಮ ಪಕ್ಷದ ಎಲೆಯಲ್ಲಿನ ನೊಣವನ್ನು ಹುಡುಕಿಕೊಂಡು ಓಡಾಡುತ್ತಿರುವ ಹಾಗಿದೆ ರಾಜ್ಯದ ಬಿಜೆಪಿ ನಾಯಕರ ದುಸ್ಥಿತಿ” ಎಂದು ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X