ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಬಳಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಿತ್ತಾಪುರ ತಲೂಕಿನ ಕೊಲ್ಲೂರು ಗ್ರಾಮದ ಆಕಾಶ್ (18) ಹಾಗೂ ಪಕ್ಕದ ಗ್ರಾಮದ ರಾಧಿಕಾ ಬಾಲಕಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.
ಯಾದಗಿರಿ ನಗರದಲ್ಲಿ ಐಟಿಐ ಓದುತ್ತಿದ್ದ ಆಕಾಶ್ ನೆರೆಯ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ರಾಧಿಕಾ ಕಳೆದೊಂದು ವರ್ಷದಿಂದ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ.
ಮಂಗಳವಾರ ತಡರಾತ್ರಿ ವಿಷ ಕುಡಿಯುವ ಮುನ್ನ ಆಕಾಶ, ತನ್ನ ತಾಯಿಗೆ ಕರೆ ಮಾಡಿ ʼನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ, ನಮ್ಮನ್ನು ಹುಡುಕಬೇಡಿ ” ಎಂದು ಹೇಳಿ ಕರೆ ಕಟ್ ಮಾಡಿದ್ದ. ಗಾಬರಿಗೊಂಡ ಪೋಷಕರು ಹುಡುಕಾಡಿದರು. ತಡರಾತ್ರಿ ಚೌಕಂಡಿ ತಾಂಡಾ ಬಳಿ ವಿಷ ಕುಡಿದು ಇಬ್ಬರು ಸಾವು ಬದುಕಿನ ಮಧ್ಯೆ ಒದ್ದಾಡುತ್ತಿದ್ದರು. ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇನ್ನು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಳಜಗಳದಲ್ಲಿ ಬಸವಳಿದ ಬಿಜೆಪಿ; ಕರ್ನಾಟಕಕ್ಕೆ ಬೇಕು ಸಮರ್ಥ ವಿರೋಧ ಪಕ್ಷ
ಘಟನಾ ಸ್ಥಳಕ್ಕೆ ವಾಡಿ ಪೊಲೀಸ್ ಠಾಣೆ ಪಿಎಸ್‌ಐ ತಿರುಮಲೇಶ ಕುಂಬಾರ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.