ವಿಧಾನಸಭೆಯಲ್ಲಿ ವಿವಿಧ ಮಸೂದೆಗಳ ಅಂಗೀಕಾರ

Date:

Advertisements

ವಿಧಾನಸಭೆಯ ಅಧಿವೇಶನದಲ್ಲಿ ಇಂದು ವಿವಿಧ ಮಸೂದೆಗಳಿಗೆ ಸದನದ ಅಂಗೀಕಾರ ನೀಡಲಾಯಿತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಡಿಸಿದ 2023ನೇ ಸಾಲಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಂಡಿಸಿದ 2023ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (2ನೇ ತಿದ್ದುಪಡಿ) ವಿಧೇಯಕವನ್ನು ಅಂಗೀಕರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಮಂಡಿಸಿದ 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕವನ್ನು, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಅವರು ಮಂಡಿಸಿದ 2023ನೇ ಸಾಲಿನ ಕರ್ನಾಟಕ ಉಚ್ಚ ನ್ಯಾಯಾಲಯ (ತಿದ್ದುಪಡಿ) ವಿಧೇಯಕ, 2023ನೇ ಸಾಲಿನ ಕರ್ನಾಟಕ ಸಿವಿಲ್ ನ್ಯಾಯಾಲಯಗಳ (ತಿದ್ದುಪಡಿ) ವಿಧೇಯಕ, 2023ನೇ ಸಾಲಿನ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ವಿಧೇಯಕ, 2023ನೇ ಸಾಲಿನ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕತೆ (ಎರಡನೇ ತಿದ್ದುಪಡಿ) ವಿಧೇಯಕ, ಹಾಗೂ ಮತ್ತು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಬಿ.ಎಸ್. ಸುರೇಶ ಅವರ ಪರವಾಗಿ ಮಂಡಿಸಿದ 2023ನೇ ಸಾಲಿನ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಅವರು ಮಂಡಿಸಿದ 2023ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ (ಹಂಚಿಕೆ ಮಾಡಬಹುದಾದ ಆಯವ್ಯಯ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) (ತಿದ್ದುಪಡಿ) ವಿಧೇಯಕಗಳನ್ನು ಸದನದಲ್ಲಿ ಅಂಗೀಕರವಾಯಿತು. ಈ ವಿಧೇಯಕಗಳು ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಬರಲಿವೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X