ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಕಾರ್ಯಕರ್ತರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕಿ ಸುಜಾತಾ ಮಾತನಾಡಿ, “ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23 ರಿಂದ ರಾಜ್ಯದಲ್ಲಿ ತರಗತಿಗಳನ್ನು ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಪಾಠಗಳಿಗೆ ಸಮಸ್ಯೆಯಾಗುತ್ತಿದೆ. ಇದನ್ನು ಬಗೆಹರಿಸಲು ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಕಾಯಂ ಉಪನ್ಯಾಸಕರ ಅಗತ್ಯವಿದೆ” ಎಂದು ಆಗ್ರಹಿಸಿದರು.
“ಕೋವಿಡ್ ನಂತರದ ದಿನಗಳಲ್ಲಿ ಸರ್ಕಾರಿ ಕಾಲೇಜಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಿತ್ತು. ಆದರೆ ಇದೀಗ ವಿದ್ಯಾರ್ಥಿಗಳು ಪುನಃ ಖಾಸಗಿ ಕಾಲೇಜುಗಳತ್ತ ಮುಖ ಮಾಡಿದ್ದಾರೆ. ಸರ್ಕಾರಿ ಕಾಲೇಜುಗಳ ದಾಖಲಾತಿ ಮತ್ತೆ ಇಳಿಕೆಯಾಗಿದೆ. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯವಿಲ್ಲದಿದ್ದರೂ ಗ್ರಾಮೀಣ ಭಾಗದಿಂದ ನಗರಕ್ಕೆ ಬಂದು ಅಧ್ಯಯನ ನಡೆಸಲು ಬರುತ್ತಿದ್ದಾರೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
“ರಾಜ್ಯದ ಅತಿಥಿ ಉಪನ್ಯಾಸಕರ ಪರವಾಗಿ ನೀತಿ ನಿಯಮಾವಳಿಗಳನ್ನು ರೂಪಿಸಿ ಅವರಿಗೆ ಸೇವಾ ಭದ್ರತೆ ಒದಗಿಸುವ ಮೂಲಕ ಸೇವೆ ಕಾಯಂಗೊಳಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅತಿಥಿ ಉಪನ್ಯಾಸಕರ ಎಲ್ಲಾ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.