ಪಿಎಸ್‌ಐ ನೇಮಕಾತಿ ಹಗರಣ | ಪರೀಕ್ಷೆಯಲ್ಲಿ ಆಯ್ಕೆಯಾದ 145 ಅಭ್ಯರ್ಥಿಗಳ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಸೂಚನೆ

Date:

Advertisements
  • ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಕರ್ನಾಟಕ ಹೈಕೋರ್ಟ್‌
  • ನ್ಯಾ. ಜಿ ನರೇಂದರ್ ಮತ್ತು ಶಿವಶಂಕರ್‌ ವಿಭಾಗೀಯ ಪೀಠದಿಂದ ಆದೇಶ

ಕಳೆದ ವರ್ಷ ನಡದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಹಾಗೂ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ 145 ಅಭ್ಯರ್ಥಿಗಳು ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ನಿರ್ದೇಶನ ನೀಡಿದೆ.

ರಾಜ್ಯ ಸರ್ಕಾರವು ಪಿಎಸ್ಐ ಮರು ಪರೀಕ್ಷೆ ನಡೆಸಲು ಆದೇಶ ನೀಡಿತ್ತು. ಈ ಆದೇಶವನ್ನು ರದ್ದು ಮಾಡುವಂತೆ ಕೋಲಾರದ ಚಂದನ್‌ ಎನ್‌ ವಿ, ವಸಂತ್‌ ನಾಯಕ್‌, ಆಶಾ ಸಣಕಲ್ಲ ಮತ್ತು ರಾಜೇಶ್ವರಿ ಸೇರಿದಂತೆ 145 ಮಂದಿ ಪ್ರತ್ಯೇಕವಾಗಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? : ಲಂಚ ಪ್ರಕರಣ | ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

Advertisements

ನ್ಯಾಯಮೂರ್ತಿಗಳಾದ ಜಿ ನರೇಂದರ್ ಮತ್ತು ಶಿವಶಂಕರ್‌ ಅಮರಣ್ಣವರ್‌ ಅವರ ನೇತೃತ್ವದ ವಿಭಾಗೀಯ ಪೀಠವು ಅಭ್ಯರ್ಥಿಗಳ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ, ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆದು ಆಯ್ಕೆಯಾಗಿ, ನ್ಯಾಯಾಲಯದ ಮೆಟ್ಟಿಲೇರಿರುವ 145 ಅಭ್ಯರ್ಥಿಗಳು ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನು ಜೂ. 15ರ ಒಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿ, ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರ ಪರ ಹಿರಿಯ ವಕೀಲ ಡಿ ಆರ್‌ ರವಿಶಂಕರ್‌ ಮತ್ತು ರಾಜಗೋಪಾಲ ವಾದ ಮಂಡಿಸಿದರೆ, ರಾಜ್ಯ ಸರ್ಕಾರದ ಪರ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

Download Eedina App Android / iOS

X