ಕಾಂಗ್ರೆಸ್ ಔತಣಕೂಟದಲ್ಲಿ ಕಾಣಿಸಿಕೊಂಡ ಬಿಜೆಪಿ ಸೋಮಶೇಖರ್‌, ಹೆಬ್ಬಾರ್; ಬಿಜೆಪಿಯಲ್ಲಿ ಬಿಸಿ ಚರ್ಚೆ

Date:

Advertisements
  • ಇಬ್ಬರು ನಾಯಕರನ್ನು ಕರೆದು ಮಾತನಾಡುತ್ತೇನೆ: ಆರ್‌ ಅಶೋಕ್
  • ಕಾಂಗ್ರೆಸ್ ಭೋಜನಕೂಟದಲ್ಲಿ ಭಾಗವಹಿಸಿದ್ದಾರೆ ಎನ್ನುತ್ತಿವೆ ಮೂಲಗಳು

ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಪಾಡಿಕೊಂಡಿರುವ ಮಾಜಿ ಸಚಿವರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಬುಧವಾರ ರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಕಾಂಗ್ರೆಸ್‌ ಶಾಸಕರಿಗೆ ಬುಧವಾರ ರಾತ್ರಿ ಏರ್ಪಡಿಸಿದ ಔತಣಕೂಟದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್‌ ಅವರು ಭಾಗವಹಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಈ ಮೂಲಕ ಈ ಇಬ್ಬರು ನಾಯಕರು ಕಾಂಗೆಸ್‌ ಸೇರಲಿದ್ದಾರೆ ಎನ್ನುವ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ.

ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಕೇಳುವ ನೆಪದಲ್ಲಿ ಹಲವು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈಗಾಗಲೇ ಈ ಇಬ್ಬರೂ ಶಾಸಕರು ಭೇಟಿ ಮಾಡಿದ್ದಾರೆ.

Advertisements

ಅಶೋಕ ಪ್ರತಿಕ್ರಿಯೆ

“ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರು ಹೋಗಿರುವ ವಿಚಾರವಾಗಿ ಕರೆದು ಮಾತನಾಡುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಆರ್.‌ಅಶೋಕ್ ಹೇಳಿದರು.

ಸುವರ್ಣಸೌಧದಲ್ಲಿ ಗುರುವಾರ ಮಾತನಾಡಿದ ಅವರು, “ಸಿಎಲ್‌ಪಿ ಸಭೆಗೆ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್, ಎಚ್.ವಿಶ್ವನಾಥ್ ಹೋಗಿರುವ ವಿಚಾರ ತಿಳಿದಿದೆ. ಊಟಕ್ಕೆ ಕರೆದಿದ್ದರು ಅದಕ್ಕಾಗಿ ಹೋಗಿದ್ದೆವು ಎಂದು ಎಸ್.ಟಿ.ಸೋಮಶೇಖರ್ ನನ್ನ ಬಳಿ ಹೇಳಿದ್ದಾರೆ. ಆ ದೃಷ್ಟಿಯಿಂದ ಯಾವುದೇ ರೀತಿಯ ಶಿಸ್ತು ಉಲ್ಲಂಘನೆ ಮಾಡಿಲ್ಲ” ಎಂದರು.

ಬೋಜನಕೂಟಕ್ಕೂ ಮೊದಲು ಕಾಂಗ್ರೆಸ್‌ ಶಾಸಕರ ಸಭೆ ನಡೆಯಿತು. ವಿಧಾನಸಭೆ ತಡವಾಗಿ ಮುಕ್ತಾಯವಾದ ಕಾರಣ ಎಲ್ಲ ಶಾಸಕರು ಬಂದು ಸೇರುವುದು ವಿಳಂಬವಾಯಿತು. ಹೀಗಾಗಿ ವಿಳಂಬವಾಗಿ ಸಭೆ ಆರಂಭವಾಯಿತು. ಸಭೆಯಲ್ಲಿ ಸೋಮಶೇಖರ್‌ ಮತ್ತು ಹೆಬ್ಬಾರ್‌ ಭಾಗವಹಿಸಲಿಲ್ಲ. ಆದರೆ, ಭೋಜನದಲ್ಲಿ ಎಲ್ಲರ ಜೊತೆ ಭಾಗವಹಿಸಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X