ಸಂಸತ್ ಭದ್ರತಾ ಲೋಪ | ಚರ್ಚೆಗೆ ಪಟ್ಟು ಹಿಡಿದ ಸಂಸದ ಡೆರೆಕ್‌ ಓಬ್ರಿಯಾನ್ ರಾಜ್ಯಸಭೆಯಿಂದ ಅಮಾನತು

Date:

Advertisements

ಲೋಕಸಭೆ ಭದ್ರತಾ ಲೋಪ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಪಟ್ಟು ಹಿಡಿದಿದ್ದ ಟಿಎಂಸಿ ಸಂಸದ ಡೆರೆಕ್‌ ಓಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.

ಲೋಕಸಭೆಯಲ್ಲಿ ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು, ಸ್ಮೋಕ್ ಡಬ್ಬಿಗಳನ್ನು ಸಿಡಿಸಿದ ಘಟನೆಯ ಕುರಿತು ವಿಪಕ್ಷಗಳು ಚರ್ಚೆಗೆ ಆಗ್ರಹಿಸಿವೆ. ಈ ನಡುವೆ ಟಿಎಂಸಿ ಸಂಸದ ಡೆರೆಕ್‌ ಓಬ್ರಿಯಾನ್ ಸದನದ ಬಾವಿಗಳಿದು ಪ್ರತಿಭಟನೆ ಮಾಡಿದ್ದರು. ಇದರಿಂದಾಗಿ ಒಬ್ರಿಯಾನ್ ಅವರನ್ನು ಅಮಾನತು ಮಾಡಿರುವುದಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ತಿಳಿಸಿದರು.

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್‌ ಓಬ್ರಿಯಾನ್ ಅವರನ್ನು ‘ಅಶಿಸ್ತಿನ ವರ್ತನೆಗಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ನಿರ್ಣಯ ಮಂಡಿಸಿದರು. ಇದಕ್ಕೆ ವಿಪಕ್ಷಗಳು ಗದ್ದಲ ಸೃಷ್ಟಿಸಿದರೆ, ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದರು.

Advertisements

“ಟಿಎಂಸಿ ಸದಸ್ಯ ಡೆರೆಕ್ ಒಬ್ರಿಯಾನ್ ಅವರು ನಿಯಮಗಳನ್ನು ಗೌರವಿಸುವುದಿಲ್ಲ. ಇದು ಗಂಭೀರ ದುರ್ನಡತೆಯಾಗಿದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ. ಹಾಗಾಗಿ, ರಾಜ್ಯಸಭೆಯ ನಿಯಮ 256ರ ಅನ್ವಯ ಡೆರೆಕ್ ಒಬ್ರಿಯಾನ್ ಅವರನ್ನು ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದರು.

ಈ ನಡುವೆ ಡೆರೆಕ್‌ ಓಬ್ರಿಯಾನ್ ಸಹಿತ ವಿಪಕ್ಷಗಳ ಸದಸ್ಯರು, ‘ಸರ್ವಾಧಿಕಾರಿ ನಡೆ ಸರಿಯಲ್ಲ’ ಎಂದು ಘೋಷಣೆ ಕೂಗ ತೊಡಗಿದರು. ಈ ಹಿನ್ನೆಲೆಯಲ್ಲಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಕಲಾಪವನ್ನು ಮತ್ತೆ 2 ಗಂಟೆಗೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X