ಸಂಸತ್ ಭದ್ರತಾ ಲೋಪ | ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

Date:

Advertisements

ಲೋಕಸಭೆಯ ಭದ್ರತಾ ಲೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳಿಗೆ ಲೋಕಸಭೆಯ ಒಳಗೆ ಪ್ರವೇಶಿಸಲು ಪಾಸ್‌ ನೀಡಿದ್ದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಕಾರ್ಯಕರ್ಯರು ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಬಳಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು, ದೇಶದ ಸಂಸತ್ ಭವನದ ಒಳಗಡೆ ದೇಶದ ಆಂತರಿಕ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸಂಸತ್ ಭವನ ಒಳ ಪ್ರವೇಶಿಸಲು ಅವಕಾಶ ಕಲ್ಪಿಸಿಕೊಟ್ಟಿರುವ ಬಿಜೆಪಿಯ ಮೈಸೂರು ಸಂಸದ ಪ್ರತಾಪ್ ಸಿಂಹನನ್ನು ಕೂಡಲೇ ಬಂಧಿಸಿ ತನಿಖೆಗೊಳಪಡಿಸಬೇಕು ಎಂದು ಘೋಷಣೆ ಕೂಗಿ, ಆಗ್ರಹಿಸಿದರು.

“ಕೇವಲ ಪ್ರಚಾರದಲ್ಲಿ ಮುಳುಗಿರುವ ಕೇಂದ್ರ ಸರ್ಕಾರ, ದೇಶದ ಶಕ್ತಿ ಕೇಂದ್ರ ಹಾಗೂ ಸಂಸತ್ ಭವನಕ್ಕೆ ಸೂಕ್ತ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ. ಇದರ ನೈತಿಕ ಹೊಣೆಯನ್ನು ದೇಶದ ಪ್ರಧಾನಿ ಹಾಗೂ ಗೃಹ ಸಚಿವರು ಹೊರಬೇಕು. ನೂತನ ಸಂಸತ್ ಭವನದಲ್ಲಿ ಸದನ ನಡೆಯುವ ವೇಳೆಯಲ್ಲಿ ದುರುಳರು ಆಗಮಿಸಿರುವುದು ಅತ್ಯಂತ ದುರದೃಷ್ಟಕರ ಹಾಗೂ ಆತಂಕಕಾರಿ ಬೆಳವಣಿಗೆ. ಈ ಘಟನೆಗೆ ಯಾರು ಹೊಣೆಗಾರರು ಎಂಬುದನ್ನು ದೇಶದ ಜನತೆಗೆ ತಿಳಿಸಬೇಕು” ಎಂದು ಒತ್ತಾಯಿಸಿದರು.

Advertisements

protest 4

“ದೇಶದ ಆಂತರಿಕ ಭಯೋತ್ಪಾದಕರು ಇಂತಹ ಹೇಯಕೃತ್ಯ ಮಾಡಿರುವುದು ದೇಶವೇ ತಲೆತಗ್ಗಿಸುವಂತಾಗಿದೆ. ದೇಶದ ನಕಲಿ ಭಕ್ತರೇ ಹಾಗೂ ಅಂಧ ಭಕ್ತರು ಈಗ ಉತ್ತರಿಸಬೇಕು. ದೇಶದ ಅಭದ್ರತೆಗೆ ಬಿಜೆಪಿ ಹಾಗೂ ಕೇಂದ್ರ ಸರ್ಕಾರವೇ ಕಾರಣ ಎಂಬುದನ್ನು ಬಿಜೆಪಿ ಮುಖಂಡರು ಒಪ್ಪಿಕೊಳ್ಳಬೇಕು. ಸಂಸತ್ ದಾಳಿಗೆ ಕಾರಣವಾಗಿರುವ ಹಾಗೂ ಅದಕ್ಕೆ ಅವಕಾಶ ಕಲ್ಪಿಸಿಕೊಟ್ಟಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹನನ್ನು ಕೂಡಲೇ ಬಂಧಿಸಬೇಕು. ಹೆಚ್ಚಿನ ತನಿಖೆ ಮೂಲಕ ಸತ್ಯಾಂಶ ಬಹಿರಂಗಪಡಿಸಬೇಕು” ಎಂದು ಲೋಕಸಭೆಯ ಅಧ್ಯಕ್ಷ ಓಂಪ್ರಕಾಶ್ ಬಿರ್ಲಾರವರನ್ನು ಆಗ್ರಹಿಸಿದರು.

ಪಾಸ್ ನೀಡಿರುವ ಸಂಸದ ಪ್ರತಾಪ್ ಸಿಂಹನನ್ನು ಬಂಧಿಸಿ, ಕೂಡಲೇ ಅನರ್ಹಗೊಳಿಸಬೇಕೆಂದು ಆಗ್ರಹಿಸಿ, ರಾಜಭವನ ಚಲೋ ಮೆರವಣಿಗೆ ನಡೆಸಲು ಹೊರಟರು. ಈ ವೇಳೆಯಲ್ಲಿ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಹಿಡಿದು, ಬಂಧಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹುಚ್ಚಪ್ಪ, ಜಿಲ್ಲಾಧ್ಯಕ್ಷರಾದ ಓ.ಮಂಜುನಾಥ್, ಕೆ.ವಿ.ಗೌತಮ್, ಜಿ. ಕೃಷ್ಣಪ್ಪ ಹಾಗೂ ಪಕ್ಷದ ಮುಖಂಡರುಗಳಾದ ಜಿ.ಜನಾರ್ದನ್, ಸುಧಾಕರ್, ಪರಿಸರ ರಾಮಕೃಷ್ಣ, ಪ್ರ ಕಾಶ್, ಹೇಮರಾಜ್, ರಘು, ಉಮೇಶ್, ಪುಟ್ಟರಾಜು, ಚಂದ್ರಶೇಖರ, ದರ್ಶನ್, ಆನಂದ್, ಚೇತನ್, ಓಬಳೇಶ್, ಚಿನ್ನಿ ಪ್ರಕಾಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X