ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಧಾರವಾಡ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿದಾರರು ತಮ್ಮ ಅರ್ಜಿಗಳನ್ನು ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ ಬಿ ಆರ್ ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಸಲ್ಲಿಸಬಹುದು. ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು 2023ರ ಡಿಸೆಂಬರ್ 31ರವರೆಗೆ ಅವಕಾಶವಿದೆ ಎಂದು ಅವರು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಧಾರವಾಡ | ಭಾರತದಲ್ಲಿ ಸಾವಯವ ಉತ್ಪಾದನೆ ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯಕ್ಕಾಗಿ ತಯಾರಿ; ಸಮಾರೋಪ ಕಾರ್ಯಕ್ರಮ
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http:/kea.kar.nic.in ಮತ್ತು http://kreis.kar.nic.in ಅಥವಾ ಅಪರ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0836-2447201ಕ್ಕೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.