ರಾಯಚೂರು | ಸಂಸತ್‌ ಘಟನೆಯ ಆರೋಪಿ ಎಸ್‌ಎಫ್‌ಐನವರೆಂದು ಅಪಪ್ರಚಾರ; ಕಾನೂನು ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

Date:

Advertisements

ಸಂಸತ್ತಿನಲ್ಲಿ ನಡೆದ ಘಟನೆಯ‌ ಆರೋಪಿ ಮನೋರಂಜನ್ ಎಂಬ ವ್ಯಕ್ತಿಯು ಎಸ್‌ಎಫ್‌ಐ ಸಂಘಟನೆಯವರು ಎಂದು ಸುಳ್ಳು ಸುದ್ದಿ ಹಂಚುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್‌ಎಫ್‌ಐ ರಾಯಚೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.

“ದೇಶದ ಪ್ರಜೆಗಳನ್ನು ಪ್ರತಿನಿಧಿಸುವ ಪವಿತ್ರ ಸ್ಥಳ ಲೋಕಸಭೆಗೆ ಕೆಲವು ಕಿಡಿಗೆಡಿಗಳು ನುಗ್ಗಿ ಕಲರ್ ಗ್ಯಾಸ್ ಸಿಂಪಡಿಸುವ ಮೂಲಕ ಭಾರೀ ಭದ್ರತಾ ಲೋಪವನ್ನು ಎಸಗಿದ್ದಾರೆ. ಇದು ಅಕ್ಷಮ್ಯ ಅಪರಾಧ ಮತ್ತು ಖಂಡನೀಯ. ಈ ಕೃತ್ಯ ಎಸಗಿದವರನ್ನು ಈಗಾಗಲೇ ಬಂಧಿಸಲಾಗಿದೆ. ಅವರನ್ನು ಸೂಕ್ತ ವಿಚಾರಣೆಗೆ ಒಳಪಡಿಸಿ ಕಾನೂನು ಕ್ರಮಕ್ಕೆ ಮುಂದಾಗಬೇಕು” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪುರ ಅವರು ಒತ್ತಾಯಿಸಿದರು.

“ಕೃತ್ಯ ಎಸಗಿದವರ ಪೈಕಿ ಇಬ್ಬರೂ ಕರ್ನಾಟಕದವರು, ಒಬ್ಬರು ಹರಿಯಾಣದವರು, ಮತ್ತೋರ್ವರು ಮಹಾರಾಷ್ಟ್ರ ಮೂಲದವರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಇವರೆಲ್ಲ ಲೋಕಸಭೆಗೆ ಪ್ರವೇಶ ಮಾಡಲು ಇವರಿಗೆ ಪಾಸ್ ನೀಡಿದವರು ಯಾರು? ಇವರ ಹಿಂದೆ ಯಾರೆಲ್ಲಾ ಇದ್ದಾರೆ, ಇದಕ್ಕೆ ಕುಮ್ಮಕ್ಕು ನೀಡಿದವರು ಯಾರು? ಮತ್ತು ಇವರ ಉದ್ದೇಶ ಏನಾಗಿತ್ತು ಎಂಬುದರ ಕುರಿತು ಸಮಗ್ರ ತನಿಖೆ ನಡೆಯಲಿ” ಎಂದು ಆಗ್ರಹಿಸಿದರು.

Advertisements

ಎಸ್ಎಫ್ಐ ಸಂಘಟನೆ ತ್ಯಾಗ, ಬದ್ಧತೆ ಮತ್ತು ಸಿದ್ಧಾಂತವನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳ, ಶಿಕ್ಷಣದ ಮತ್ತು ಸಮಾಜದ ಪ್ರಗತಿಗಾಗಿ ಹಾಗೂ ಸೌಹಾರ್ದ, ಸಾಮರಸ್ಯದ ಘನತೆಯ ಬದುಕಿಗಾಗಿ ದಶಕಗಳಿಂದ ವಿದ್ಯಾರ್ಥಿ ಸಮುದಾಯದ ಪರವಾಗಿ ದೇಶಾದ್ಯಂತ ಹೋರಾಟ ಮಾಡುತ್ತಾ ಬರುತ್ತಿದೆ. ಇದನ್ನು ಸಹಿಸದ ಈ ದೇಶದ ಕೋಮುವಾದಿ ಬಿಜೆಪಿ ಕಾರ್ಯಕರ್ತರು ಸೈದ್ದಾಂತಿಕವಾಗಿ ಸಂಘಟನೆಯನ್ನು ಎದುರಿಸಲಾಗದೆ. ಈ ಪ್ರಕರಣದಲ್ಲಿ ‌ವಿನಾಕಾರಣ ಎಸ್ಎಫ್ಐ ಮೈಸೂರು ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್ ಪೋಟೋವನ್ನು ದುರ್ಬಳಕೆ ಮಾಡಿಕೊಂಡು ಇವನೇ ಮನೋರಂಜನ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ.” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಸಂಸತ್‌ಗೆ ‘ಕಲರ್‌ ಸ್ಮೋಕ್’ ಹೇಗೆ ಕೊಂಡೊಯ್ಯಬೇಕೆಂದು ಮೊದಲೇ ತಿಳಿದಿದ್ದ ಆರೋಪಿಗಳು

“ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿಯವರು ಸೋಶಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡುತ್ತಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಕೃತ್ಯ ಎಸಗಿದ ವ್ಯಕ್ತಿಗಳ ಬಂಧನ ಆದರೂ ದುರುದ್ದೇಶದಿಂದ ಇಂತಹ ಕೆಲಸ ಮಾಡುತ್ತಿರುವ ಬಿಜೆಪಿಯ ಐಟಿ ಸೆಲ್‌ಗಳು ಹಾಗೂ ಅದನ್ನು ನಿರ್ವಹಿಸುವ ಅಡ್ಮಿನ್‌ಗಳನ್ನು ಮತ್ತು ಸುಳ್ಳು ಸುದ್ದಿಯನ್ನು ಶೇರ್ ಮಾಡುತ್ತಿರುವ ಎಲ್ಲ ವ್ಯಕ್ತಿಗಳು ಹಾಗೂ ಗುಂಪುಗಳ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಭಾರತ ವಿದ್ಯಾರ್ಥಿ ಫೆಡರೇಷನ್‌ ಪರವಾಗಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X