4 ಲಕ್ಷ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಮೂಲ ಸೌಕರ್ಯ: ಇಂಧನ ಸಚಿವ ಕೆ ಜೆ ಜಾರ್ಜ್

Date:

Advertisements

ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಸರ್ಕಾರದಿಂದ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.

ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಗುರುವಾರ ವಿಧಾನ ಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

“ನೋಂದಾಯಿಸಲ್ಪಟ್ಟ 500 ಮೀಟರ್ ವ್ಯಾಪ್ತಿಯೊಳಗಡೆ ಇರುವ ಪಂಪ್ ಸೆಟ್‍ಗಳಿಗೆ ವಿದ್ಯುತ್ ಸರಬರಾಜು ಕಂಪನಿಗಳಿಂದ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು. 500 ಮೀಟರ್ ಆಚೆ ಇರುವ ಪಂಪ್ ಸೆಟ್‍ಗಳಿಗೆ ಕೇಂದ್ರ ಸರ್ಕಾರದ ಶೇ.30 ಹಾಗೂ ರಾಜ್ಯ ಸರ್ಕಾರ ಶೇ.50 ರಷ್ಟು ಸಬ್ಸಿಡಿ ನೀಡಿ, ಸೋಲಾರ್ ಪಂಪ್ ಸೆಟ್ ಅಳವಡಿಸಲು ಕ್ರಮವಹಿಸಲಾಗಿದೆ” ಎಂದರು.

Advertisements

“ದಿನಾಂಕ 22.09.2023ರ ನಂತರ ನೋಂದಾಯಿಸಲ್ಪಡುವ ಐಪಿ ಸೆಟ್‍ಗಳಿಗೆ ಮೂಲಸೌಕರ್ಯಗಳನ್ನು ರೈತರು ಸ್ವಯಂ-ಕಾರ್ಯನಿರ್ವಹಣೆಯಡಿ ತಾವೇ ಮಾಡಿಕೊಳ್ಳಬೇಕು ಎಂಬ ನಿಯಮವಿತ್ತು. ಇದನ್ನು ಮಾರ್ಪಡಿಸಿ ಸರ್ಕಾರವೇ ಮೂಲ ಸೌಕರ್ಯ ಒದಗಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಸಲ್ಲಿಸಲಾಗಿದೆ” ಎಂದು ಹೇಳಿದರು.

“ರಾಜ್ಯದಲ್ಲಿ ಕೃಷಿಗೆ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಮಳೆ ಕೊರತೆಯಿಂದಾಗಿ ಜಲಮೂಲದಿಂದ ಉತ್ಪತ್ತಿಯಾಗುತ್ತಿದ್ದ ವಿದ್ಯುತ್ ಪ್ರಮಾಣ ಕಡಿಮೆಯಾಗಿದೆ. ಇದರೊಂದಿಗೆ ರಾಜ್ಯದ ವಿದ್ಯುತ್ ಬೇಡಿಕೆ 8000 ಮೆಗಾ ವ್ಯಾಟ್ ನಿಂದ 16500 ಮೆಗಾ ವ್ಯಾಟ್‍ಗೆ ಏರಿಕೆಯಾಗಿ, ವಿದ್ಯುತ್ ಅಭಾವ ಉಂಟಾಗಿತ್ತು. ಹೊರ ರಾಜ್ಯಗಳಿಂದ ಒಪ್ಪಂದ ಮಾಡಿಕೊಂಡು ವಿದ್ಯುತ್ ಖರೀದಿಸಲಾಗಿದೆ. ಇದರೊಂದಿಗೆ ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿಯೂ ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ಸದ್ಯ ರಾಜ್ಯದಲ್ಲಿ ಯಾವುದೇ ವಿದ್ಯುತ್ ಕೊರತೆ ಇಲ್ಲ” ಎಂದು ಜಾರ್ಜ್ ಸ್ಪಷ್ಟಪಡಿಸಿದರು.

“ರೈತರು ತಮ್ಮ ಕೃಷಿ ಪಂಪ್ ಸೆಟ್‍ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಲು ವಿದ್ಯುತ್ ಕಂಬ, ಪರಿವರ್ತಕ, ವಿದ್ಯುತ್ ತಂತಿ ಹಾಗೂ ಸೇವಾ ಶುಲ್ಕಗಳನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡಬೇಕು. ಇದಕ್ಕೆ ಸುಮಾರು 2 ರಿಂದ 3 ಲಕ್ಷ ರೂಪಾಯಿಗಳು ಖರ್ಚಾಗುತ್ತವೆ. ಇದು ರೈತರಿಗೆ ಹೊರೆಯಾಗುವುದರಿಂದ ಸರ್ಕಾರವೇ ಈ ಎಲ್ಲಾ ವೆಚ್ಚಗಳನ್ನು ಭರಿಸಿ ವಿದ್ಯುತ್ ಸಂಪರ್ಕ ಕಲ್ಲಿಸಿಕೊಡಬೇಕು” ಎಂದು ಕಾಗವಾಡ ಶಾಸಕ ಭರಮಗೌಡ ಅಲಗೌಡ ಕಾಗೆ ಇಂಧನ ಸಚಿವರಲ್ಲಿ ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X