ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಂಗಳೂರಿನ ಉಳ್ಳಾಲದ ಬಳಿ ನಡೆದಿದೆ.
iಉಳ್ಳ ಸೂರಜ್ ಮತ್ತು ರವಿರಾಜ್ ಆರೋಪಿಗಳು ಎಂದು ಹೇಳಲಾಗಿದೆ.
ಆರೋಪಿಗಳು ಶಾಲೆಯ ಮುಂಭಾಗದ ಕಟ್ಟೆಯ ಮೇಲೆ ಕುಳಿತು, ಮದ್ಯ ಸೇವಿಸಿ ಬಾಟಲಿಗಳನ್ನು ರಸ್ತೆಗೆ ಎಸೆದಿದ್ದರು. ಈ ವೇಳೆ, ಅಲ್ಲಿಗೆ ಬಂದ ವರುಣ್ ಮತ್ತು ಆತನ ಸ್ನೇಹಿತ ಅಕ್ಷಯ್, ರಸ್ತೆಗೆ ಬಾಟಿಲಿ ಎಸೆದಿದ್ದನ್ನು ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಅವರ ಪ್ರಶ್ನೆಯಿಂದ ವಿಚಲಿತರಾದ ಆರೋಪಿಗಳು ಗಲಾಟೆ ಮಾಡಿದ್ದಾರೆ. ಗಲಾಟೆ ತಾರಕಕ್ಕೇರಿದ್ದು, ವರುಣ್ ಬೆನ್ನಿಗೆ ಹರಿತವಾದ ಆಯುಧದಿಂದ ಆರೋಪಿಗಳು ಇರಿದಿದ್ದಾರೆ ಎಂದು ಹೇಳಲಾಗಿದೆ.
ಗಂಭೀರ ಗಾಯಗೊಂಡ ವರುಣಣ್‌ನನ್ನು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂಧಿಸದೆ ವರಣ್ ಸಾವನ್ನಪ್ಪಿದ್ದಾರೆ.
ಆರೋಪಿಗಳಾದ ಸೂರಜ್ ಮತ್ತು ರವಿರಾಜ್‌ನನ್ನು ಉಳ್ಳಾಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.