ಬೆಂಗಳೂರು | ವೈಟ್ ಟಾಪಿಂಗ್ ರಸ್ತೆ ಕುಸಿತ: ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಎಎಪಿ ಮನವಿ

Date:

Advertisements

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಹಲಸೂರು ಕೆರೆ ಬಳಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ವೈಟ್ ಟಾಪಿಂಗ್ ರಸ್ತೆ ಕುಸಿದು ಸೃಷ್ಟಿಯಾಗಿದ್ದ ದೊಡ್ಡ ಗುಂಡಿಗೆ ಮಹಾಪೂಜೆ ಮಾಡುವ ಮೂಲಕ ಕಳಪೆ ಕಾಮಗಾರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಆಮ್ ಆದ್ಮಿ ಪಕ್ಷದ ನಾಯಕರು, ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರದ ಬಗ್ಗೆ ಸಮರ್ಪಕ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ಮನವಿ ಮಾಡಿದ್ದಾರೆ.

ಆಮ್ ಆದ್ಮಿ ಪಕ್ಷದ ಬೆಂಗಳೂರು ಜಿಲ್ಲಾಧ್ಯಕ್ಷ ಡಾ. ಸತೀಶ್ ಕುಮಾರ್ ನೇತೃತ್ವದಲ್ಲಿ ಕರ್ನಾಟಕ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಮುಖ್ಯ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.

ಬಳಿಕ ಮಾತನಾಡಿದ ಡಾ. ಸತೀಶ್ ಕುಮಾರ್, “ವೈಟ್ ಟಾಪಿಂಗ್ ರಸ್ತೆಗೆ ಖರ್ಚಾಗುವ ಹಣಕ್ಕಿಂತ ಹತ್ತು ಪಟ್ಟು ಹೆಚ್ಚು ನೀಡಲಾಗಿದೆ ಎಂದು ಹೇಳಲಾಗಿದೆ. ಸುಮಾರು ₹1200 ಕೋಟಿ ಅಧಿಕ ಹಣವನ್ನು ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ ರಸ್ತೆಗಾಗಿ ಬಿಡುಗಡೆ ಮಾಡಲಾಗಿದೆ. ಆದರೆ, ಅಂತಹ ರಸ್ತೆಗಳು ಬಿರುಕು ಬಿಟ್ಟಿದ್ದು ಕಳಪೆ ಕಾಮಗಾರಿ ನಡೆದಿದೆ” ಎಂದು ಆರೋಪಿಸಿದರು.

Advertisements

“ಈಗಾಗಲೇ ಬೆಂಗಳೂರಿನಲ್ಲಿ 30 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳಿವೆ ಎಂದು ಬಿಬಿಎಂಪಿ ಹೇಳಿತ್ತು. ಅದರಲ್ಲಿ ಇನ್ನು 2000 ಗುಂಡಿಗಳನ್ನು ಮುಚ್ಚುವುದು ಬಾಕಿ ಇದೆ ಎಂದು ಹೇಳಿದೆ. ಸರ್ಕಾರ ಮತ್ತು ಬಿಬಿಎಂಪಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದರೂ, ಗುಣಮಟ್ಟದ ಕೆಲಸ ಆಗುತ್ತಿಲ್ಲ” ಎಂದರು.

“ಎಲ್ಲ ವಿಚಾರಗಳನ್ನು ಲೋಕಾಯುಕ್ತರ ಗಮನಕ್ಕೆ ತರಲಾಗಿದೆ. ಬಿಬಿಎಂಪಿ ಕಮಿಷನರ್, ಮುಖ್ಯ ಇಂಜಿನಿಯರ್  ಹಾಗೂ ಗುಂಡಿ ಬಿದ್ದ ರಸ್ತೆಯ ವಲಯ ಇಂಜಿನಿಯರ್ ಅವರು ಒಳಗೊಂಡಂತೆ ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ. ಅವ್ಯವಹಾರ ನಡೆದಾಗ ಅದನ್ನು ಗಮನಕ್ಕೆ ತಂದಿದ್ದಕ್ಕೆ, ಲೋಕಾಯುಕ್ತರು ಕೂಡ ಶ್ಲಾಘಿಸಿದ್ದಾರೆ. ಭ್ರಷ್ಟಾಚಾರ ಮಾಡುವ ಅಧಿಕಾರಿಗಳು ಲೋಕಾಯುಕ್ತದ ತನಿಖೆ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಲಗುವ ವಿಚಾರಕ್ಕೆ ಜಗಳ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ಗುಣಮಟ್ಟ ಪರೀಕ್ಷೆ ನಡೆಸಲು ಮನವಿ

ಕಳೆದ 5-10 ವರ್ಷಗಳಲ್ಲಿ ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ ಸ್ಮಾರ್ಟ್ ಸಿಟಿಯಡಿ ಮಾಡಿರುವ ರಸ್ತೆಗಳ ಆಡಿಟ್ ಆಗಬೇಕು. ಗುಂಡಿ ಬಿದ್ದ ರಸ್ತೆ ನಿರ್ಮಿಸಿದ ಗುತ್ತಿಗೆದಾರರನ್ನು ತನಿಖೆಗೆ ಒಳಪಡಿಸಬೇಕು. ಭ್ರಷ್ಟಾಚಾರದ ಕುರಿತು ಕೂಲಂಕಷವಾಗಿ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಅಪಾಯಗಳು ಆಗದಂತೆ ನಿಗಾ ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಷರತ್ತು ವಿಧಿಸಬೇಕು. ಬೇರೆ ವೈಟ್ ಟಾಪಿಂಗ್ ಕಾಮಗಾರಿಗೆ ಅನುಮತಿ ನೀಡುವ ಮೊದಲು ಈಗಾಗಲೇ ಪೂರ್ಣಗೊಂಡಿರುವ ವೈಟ್ ಟಾಪಿಂಗ್ ರಸ್ತೆಗಳ ಗುಣಮಟ್ಟ ಪರೀಕ್ಷೆ ಮಾಡಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುವಾಗ ಜೀವವನ್ನು ಕೈಯಲ್ಲಿ ಹಿಡಿದುಕೊಂಡೇ ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇದ್ದಕ್ಕಿದ್ದಂತೆ ಮೆಟ್ರೋ ಪಿಲ್ಲರ್ ಕುಸಿದಿದ್ದರಿಂದ, ತುಂಡಾಗಿ ಬಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿದ್ದರಿಂದ ಈಗಾಗಲೇ ಸಾಕಷ್ಟು ಸಾವುನೋವು ಸಂಭವಿಸಿವೆ. ಬ್ರ್ಯಾಂಡ್‌ ಬೆಂಗಳೂರು ಎನ್ನುವುದಕ್ಕಿಂತ ನಮಗೆ ‘ಸುರಕ್ಷಿತ ಬೆಂಗಳೂರು’ ಬೇಕಿದೆ ಎಂದು ಪತ್ರದ ಮೂಲಕ ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಚಂದ್ರ, ವಿಶ್ವನಾಥ್, ಜಗದೀಶ್ ಬಾಬು ಹಾಗೂ ದಿಲೀಪ್ ಕುಮಾರ್ ಸೇರಿದಂತೆ ಇನ್ನಿತರ ನಾಯಕರುಗಳು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

Download Eedina App Android / iOS

X