ರಾಜಸ್ಥಾನದ ನಿಯೋಜಿತ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಶುಕ್ರವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶರ್ಮಾ ಅವರೊಂದಿಗೆ ಇತ್ತೀಚೆಗೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿದ್ದ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರವ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಮೂವರಿಗೆ ಪ್ರಮಾಣ ವಚನ ಬೋಧಿಸಿದರು.
ಆಲ್ಬರ್ಟ್ ಹಾಲ್ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ, ಹಲವಾರು ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
#WATCH | Prime Minister Narendra Modi at the swearing-in ceremony in Jaipur
BJP leader Bhajanlal Sharma took oath as the Chief Minister of Rajasthan.
Diya Kumari and Prem Chand Bairwa took oath as Deputy Chief Ministers of the state. pic.twitter.com/KF3Xot1GUM
— ANI (@ANI) December 15, 2023
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕಿ ವಸುಂಧರಾ ರಾಜೆ, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಕೂಡ ಉಪಸ್ಥಿತರಿದ್ದರು.
ಸಮಾರಂಭದ ಮೊದಲು, ಶರ್ಮಾ ಅವರು ರಾಜ್ಯ ರಾಜಧಾನಿಯ ಗೋವಿಂದ್ ದೇವ್ಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಟೋಂಕ್ ರಸ್ತೆಯಲ್ಲಿರುವ ಪಿಂಜ್ರಾಪೋಲ್ ಗೋಶಾಲೆಗೆ ಭೇಟಿ ನೀಡಿ, ಜಾನುವಾರುಗಳಿಗೆ ಆಹಾರ ನೀಡಿದರು. ಈ ವೇಳೆ ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರೂ ಜೊತೆಗಿದ್ದರು.