ಪ್ರತಾಪ್‌ ಸಿಂಹರನ್ನು ಉಚ್ಚಾಟನೆ ಮಾಡಲಿ, ಅಮಿತ್‌ ಶಾ ರಾಜೀನಾಮೆ ನೀಡಲಿ: ಎಎಪಿ ಒತ್ತಾಯ

Date:

Advertisements

ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್‌ ಸಿಂಹ ಪಾಸ್‌ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸ್‌ಗಳನ್ನು ನೀಡಲು ಹೇಗೆ ಸಾಧ್ಯ? ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್‌ ಸಿಂಹ ಅವರನ್ನು ಸಂಸತ್‌ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್‌ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್‌ ಶಾ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಮ್‌ ಆದ್ಮಿ ಪಕ್ಷ ಒತ್ತಾಯಿಸಿದೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಸತ್ತಿನ ಭದ್ರತಾ ಲೋಪ ಪ್ರಕರಣವನ್ನು ಖಂಡಿಸಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, “ಹೊಸ ಸಂಸತ್ತು ಉದ್ಘಾಟನೆಗೊಂಡ ನಂತರ ನಡೆದಿರುವ ಎರಡನೇ ಭದ್ರತಾ ಲೋಪ ಇದಾಗಿದೆ. 22 ವರ್ಷಗಳ ಹಿಂದಿನ ಭಯೋತ್ಪಾದಕರ ದಾಳಿ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ, ಈ ಘಟನೆ ಹಿಂದೆ ಬೇರೆ ಹುನ್ನಾರಗಳಿರಬಹುದು. ಇದು ದೇಶದ ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಸೃಷ್ಟಿಸಿವೆ. ಮೈಸೂರಿನ ಮೂಲದ ಮನೋರಂಜನ್‌ ಅವರಿಗೆ ಈ ಮೊದಲು ಪ್ರತಾಪ್‌ ಸಿಂಹ ಅವರೇ ಎರಡು ಬಾರಿ ಪಾಸ್‌ ನೀಡಿದ್ದರು ಎನ್ನಲಾಗುತ್ತಿದೆ. ಸಂಸತ್‌ ಸಭಾಂಗಣ ಪ್ರವೇಶಿಸಲು ಪಾಸ್‌ ಸ್ವೀಕರಿಸಿದ ವ್ಯಕ್ತಿ ನಡೆಸುವ ಎಲ್ಲ ಕೃತ್ಯಗಳಿಗೆ ಪಾಸ್‌ ಕೊಟ್ಟ ಸಂಸದರೇ ಜವಾಬ್ದಾರರಾಗಿರುತ್ತಾರೆ. ಪರಿಚಿತರಿಗಷ್ಟೇ ಪಾಸ್‌ ನೀಡಬೇಕು ಎಂಬ ನಿಯಮವಿದೆ. ಇದೆಲ್ಲವೂ ಪಾಸ್‌ನಲ್ಲಿ ಉಲ್ಲೇಖವಾಗಿರುತ್ತದೆ. ಹಾಗಾಗಿ, ಪ್ರತಾಪ್‌ ಸಿಂಹ ಅವರನ್ನು ಉಚ್ಚಾಟಿಸಿ, ವಿಚಾರಣೆಗೆ ಒಳಪಡಿಸಬೇಕು” ಎಂದು ಒತ್ತಾಯಿಸಿದರು.

Advertisements

“ಸಂಸತ್ತಿಗೆ ರಕ್ಷಣೆ ನೀಡಲಾಗದವರು, ಪ್ರಶ್ನಿಸಿದ ಸಂಸದರನ್ನು ಅಮಾನತುಗೊಳಿಸಿ ಪೌರುಷ ಮೆರೆಯುತ್ತಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕುತ್ತಿದ್ದಾರೆ. ಆದರೆ, ಈ ಭದ್ರತಾ ವೈಫಲ್ಯಕ್ಕೆ ಮೂಲ ಸಂಸದ ಪ್ರತಾಪ್‌ ಸಿಂಹ. ಅವರು ಪಾಸ್‌ ನೀಡಿದ್ದರಿಂದಲೇ ಈ ಎಲ್ಲ ಅನಾಹುತಗಳಿಗೆ ಕಾರಣ. ಪ್ರತಾಪ್‌ ಸಿಂಹ ಅವರನ್ನು ಅಮಾನತುಗೊಳಿಸಿ ವಿಚಾರಣೆಗೆ ಒಳಪಡಿಸುವ ಬದಲು ಭದ್ರತಾ ವೈಫಲ್ಯದ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದ ಸಂಸದರನ್ನೇ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ” ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

“ಸಂಸತ್‌ ಭವನ ಪ್ರವೇಶಿಸಲು ಪಾಸ್‌ ಹೊಂದಿರುವ ವ್ಯಕ್ತಿ ಬಿಗಿ ಭದ್ರತಾ ನಿಯಮ ಪಾಲಿಸಬೇಕಾಗುತ್ತದೆ. ನೀರಿನ ಬಾಟಲಿ, ಮೊಬೈಲ್‌, ಎಲೆಕ್ಟ್ರಾನಿಕ್‌ ಪರಿಕರ ಹಾಗೂ ಆಯುಧಗಳಂಥ ಯಾವುದೇ ವಸ್ತುಗಳನ್ನು ಒಳಗೆ ಕೊಂಡೊಯ್ಯುವಂತಿಲ್ಲ. ಪಾರ್ಲಿಮೆಂಟರಿ ಸೆಕ್ಯೂರಿಟಿ ಸರ್ವಿಸ್‌, ದಿಲ್ಲಿ ಪೊಲೀಸ್‌, ನಾನಾ ಏಜೆನ್ಸಿಗಳು, ಮ್ಯಾನುಯಲ್‌ ತಪಾಸಣೆ, ಬಾಡಿ ಸ್ಕ್ಯಾನರ್‌, ಮೆಟಲ್‌ ಡಿಟೆಕ್ಟರ್‌ ಹೀಗೆ ಹಲವು ಹಂತದ ಭದ್ರತಾ ವ್ಯವಸ್ಥೆಯಿರುವ ಸಂಸತ್‌ಗೆ ಗ್ಯಾಸ್‌ ಕ್ಯಾನ್‌ ತಂದಿದ್ದಾರೆ ಎಂದರೆ ಭದ್ರತಾ ವೈಫಲ್ಯವಲ್ಲದೆ ಬೇರೇನೂ ಕಾರಣವಲ್ಲ. ಆರೋಪಿಗಳಾಗಿ ಗುರುತಿಸಿಕೊಂಡಿರುವ ಮೈಸೂರು ಮೂಲದ ಮನೋರಂಜನ್‌, ಉತ್ತರ ಪ್ರದೇಶದ ಲಖನೌದ ಸಾಗರ್‌ ಶರ್ಮಾ, ಹರಿಯಾಣದ ನೀಲಂ ಹಾಗೂ ಐಕ್ಕಿ ಶರ್ಮಾ, ಗುರು ಗ್ರಾಮದ ಲಲಿತ್‌ ಝಾ ಮಹಾರಾಷ್ಟ್ರದ ಅಮೋಲ್‌ ಶಿಂಧೆ ಎಲ್ಲರೂ ಒಗ್ಗೂಡಿದ್ದು ಹೇಗೆ?” ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾಮಾನ್ಯ ಸ್ಥಿತಿಗೆ ಮರಳಿದ ಹಸಿರು ಮಾರ್ಗದ ಮೆಟ್ರೋ ಸಂಚಾರ

“ಒಂದೂವರೆ ವರ್ಷದಿಂದ ಸಂಚು ಹೂಡಿದ್ದರೂ ಕೇಂದ್ರ ಗುಪ್ತಚರಕ್ಕೆ ಗೊತ್ತಾಗಲಿಲ್ಲವೇ? ಗೃಹ ಸಚಿವ ಅಮಿತ್‌ ಶಾ ದೇಶದ ಭದ್ರತೆ ವಿಚಾರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಒಂದೆಡೆ ಚೀನಾದ ಸೇನೆ ಅರುಣಾಚಲ ಪ್ರದೇಶದ ಗಡಿಯನ್ನು ಅತಿಕ್ರಮಿಸಿ ಗ್ರಾಮಗಳನ್ನು ನಿರ್ಮಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಭಾರಿ ಏರಿಕೆಯಾಗಿದೆ. ದೇಶಕ್ಕೆ ರಕ್ಷಣೆ ನೀಡಬೇಕಾದ ಗೃಹ ಸಚಿವರು ತಮ್ಮ ಕೆಲಸವನ್ನು ಬಿಟ್ಟು ಚುನಾವಣೆಗಳನ್ನು ಹೇಗೆ ಗೆಲ್ಲುವುದು ಎಂಬ ತಂತ್ರ ಹೆಣೆಯುವುದರಲ್ಲೇ ಕಾಲಕಳೆಯುತ್ತಿದ್ದಾರೆ. ತನ್ನ ಕರ್ತವ್ಯವನ್ನು ನಿಭಾಯಿಸಲು ಆಗದ ಅಮಿತ್‌ ಶಾ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮ ಕೊಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಮೋಹನ್ , ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷ ವೀಣಾ ಸರ್ ರಾವ್ ಹಾಗೂ ಕಾರ್ಯಕರ್ತರುಗಳು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X