ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ಘೋಷಣೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

Date:

Advertisements
  • ನಂಜುಂಡಪ್ಪ ವರದಿ ಅನುಷ್ಠಾನ, ಫಲಶ್ರುತಿ ಅಧ್ಯಯನಕ್ಕೆ ಉನ್ನತಾಧಿಕಾರ ಸಮಿತಿ ರಚನೆ
  • ಸಹಕಾರ ಬ್ಯಾಂಕುಗಳಲ್ಲಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ: ಸಿದ್ದರಾಮಯ್ಯ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ಕೊಡುವ ವೇಳೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೊಸ ಘೋಷಣೆಗಳು ಘೋಷಿಸಿದ್ದಾರೆ.

1. ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿ ರಚಿಸಲಾಗುವುದು

ನಂಜುಂಡಪ್ಪ ವರದಿ ಸಲ್ಲಿಕೆಯಾಗಿ 21 ವರ್ಷಗಳಾದವು. ನಂಜುಂಡಪ್ಪನವರ ವರದಿಯನ್ನಾಧರಿಸಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಇದುವರೆಗೆ 61,330 ಕೋಟಿ ರೂ. ಅನುದಾನವನ್ನು ಒದಗಿಸಿದೆ. ಸುಮಾರು 42,000 ಕೋಟಿ ರೂ. ಖರ್ಚು ಮಾಡಿದೆ. ನಂಜುಂಡಪ್ಪನವರ ವರದಿಯನ್ನಾಧರಿಸಿ ನೀಡಲಾಗುವ ವಿಶೆಷ ಅಭಿವೃದ್ಧಿ ಯೋಜನೆಯಡಿಯೇ 32,433.43 ಕೋಟಿ ರೂ. ಖರ್ಚು ಮಾಡಲಾಗಿದೆ.

Advertisements

ಇದರ ಜೊತೆಯಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿ ವತಿಯಿಂದಲೂ ಅನುದಾನಗಳನ್ನು ಒದಗಿಸಲಾಗಿದೆ. ಇಷ್ಟೆಲ್ಲ ಮಾಡಿದರೂ ಮಾನವ ಅಭಿವೃದ್ಧಿ ಸೂಚ್ಯಂಕವು ನಿರೀಕ್ಷಿತ ಮಟ್ಟದಲ್ಲಿ ಸುಧಾರಿಸುತ್ತಿಲ್ಲ. ಶಿಕ್ಷಣ, ಆರೋಗ್ಯ, ಆದಾಯಗಳಿಕೆ ಮುಂತಾದವುಗಳಲ್ಲಿ ಹಿನ್ನಡೆಯನ್ನು ಈ ಜಿಲ್ಲೆಗಳು ಅನುಭವಿಸುತ್ತಿವೆ. ಹಾಗಾಗಿ ವಿಶೇಷವಾಗಿ ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ [ಉನ್ನತಾಧಿಕಾರ ಸಮಿತಿ] ಕಮಿಟಿಯನ್ನು ರಚಿಸಲಾಗುವುದು.

2. ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು.

3. ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಸಿ ದೇಶಭಕ್ತಿಯ ಆಕ್ರೋಶದಲ್ಲಿ ಸುಟ್ಟು ಹೋಗದಿರಲಿ ‘ಅತಿಕ್ರಮಣದ’ ಸಂದೇಶ

4. ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುತ್ತದೆ.

5. ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಟಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು.

6. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು.

7. ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತಾರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಆದರೆ ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ನಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸುತ್ತೇವೆ.

8. ಧಾರವಾಡದಲ್ಲಿರುವ ವಾಲ್ಮಿ(ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ)ಯನ್ನು ಉನ್ನತೀಕರಿಸಲಾಗುವುದು. ಇದನ್ನು ‘Centre of excellence for water management’ಯನ್ನಾಗಿ ಬದಲಾಯಿಸಿ ಇದರ ಮೂಲಕ ಜಲ ಶಿಕ್ಷಣ ನೀಡುವುದಷ್ಟೆ ಅಲ್ಲ, ಉತ್ತರ ಕರ್ನಾಟಕದ ಮಣ್ಣಿನ ಸವುಳು- ಜವುಳು ಸಮಸ್ಯೆಯನ್ನು ನಿರ್ವಹಿಸಲಾಗುವುದು. ಹಾಗೂ ರೈತರ ಆದಾಯ ಹೆಚ್ಚಳದ ಕಡೆಗೆ ಒತ್ತು ನೀಡಲಾಗುವುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X