ವಿಜಯಪುರ | ಅತಿಥಿ ಉಪನ್ಯಾಸಕರ ಅರೆಬೆತ್ತಲೆ ಪ್ರತಿಭಟನೆ

Date:

Advertisements

ಸೇವೆ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಗುರುವಾರ(ಡಿ.14) ವಿಜಯಪುರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಕಛೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿರುವ ಸರ್ಕಾರಿ ಪದವಿ ಕಾಲೇಜುಗಳ ಉಪನ್ಯಾಸಕರು, ನಗರದಲ್ಲಿ ಜಾಥಾ ಮಾಡಿದ್ದಲ್ಲದೇ, ಸರ್ಕಾರದದ ಮೇಲೆ ಒತ್ತಡ ಹೇರಲು ಅರೆ ಬೆತ್ತಲೆ ಪ್ರತಿಭಟನೆ ಕೈಗೊಂಡರು.

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಕಳೆದ 20ವರ್ಷಗಳಿಂದ ಯಾವುದೇ ಸೌಲಭ್ಯಗಳಿಲ್ಲದೇ ಅತ್ಯಂತ ಕಡಿಮೆ ಸಂಬಳಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದರೂ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟದಿಂದಾಗಿ ನಿತ್ಯದ ಜೀವನ ನಿರ್ವಹಣೆಗೆ ಪರದಾಡುವ ದುಸ್ಥಿತಿಯಲ್ಲಿದ್ದೇವೆ. ಇಷ್ಟಾದರೂ ಸರ್ಕಾರ ಮಾನವೀಯ ನೆಲೆಯಲ್ಲಿ ನಮ್ಮ ಸಮಸ್ಯೆಗಳನ್ನು ಆಲಿಸುವ ಹಾಗೂ ಪರಿಹರಿಸುವಲ್ಲಿ ಆಸಕ್ತಿ ತೋರಿಲ್ಲ ಎಂದು ವಾಗ್ದಾಳಿ ನಡೆಸಿದರು.

Advertisements

ಸೇವೆ ಖಾಯಂ ಮಾಡುವುದು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೂರು ವಾರಗಳಿಂದ ತರಗತಿ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದೇವೆ. ಆದರೂ ಸರ್ಕಾರ ತಮ್ಮ ಬೇಡಿಕೆಗಳ ಈಡೇರಿಕೆಗೆ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.

ಮುಷ್ಕರದಲ್ಲಿ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಡಬ್ಬಿ, ಕಾರ್ಯದರ್ಶಿ ಆರ್.ಎಲ್.ಕಡೆಮನಿ, ಡಾ.ಆನಂದ ಕುಲಕರ್ಣಿ, ಡಾ.ರಾಜು ಚವ್ಹಾಣ, ಡಾ.ಎಸ್.ಐ.ಎಂಬತ್ತನಾಳ, ಡಾ. ರಮೇಶ ತೇಲಿ, ಡಾ.ಆರ್.ಸಿ.ದಾಯಗೊಂಡ, ಡಾ.ರೇಣುಕಾ ಹೆಬ್ಬಾಳ, ಡಾ.ಅಶೋಕ ಬಿರಾದಾರ, ಡಾ.ಡಿ.ಬಿ.ಕುಲಕಣಿ, ಡಾ.ಎಸ್.ಎ.ಪಾಟೀಲ, ಡಾ.ಎಸ್.ಡಿ.ಬಿರಾದಾರ, ಡಾ.ಎಸ್.ಬಿ. ಗಂಗಮಾಲಿ, ಡಾ. ಎಸ್.ಎಸ್. ಗಡಿಗೆಪ್ಪಗೌಡರ, ಡಾ.ಎಸ್.ಪಿ.ತಳವಾರ, ಡಾ.ಆರ್.ಬಿ. ನಾಗರಡ್ಡಿ, ಡಾ.ಎಂ.ಎಸ್. ಶಿವಶರಣ, ಡಾ.ರಾಜೇಶ್ವರಿ ಅವಟಿ, ಡಾ.ರೇಣುಕಾ ಹೆಬ್ಬಾಳ, ಡಾ.ಎಚ್.ಕುಮಾರಸ್ವಾಮಿ, ಶಿವಾನಂದ ಸಿಂಹಾಸನಮಠ, ಗಜ್ಜು ರಾಠೋಡ, ಗೀತಾ ರಜಪೂತ, ಡಾ.ವಿಜಯಲಕ್ಷ್ಮೀ ಪಾಟೀಲ, ಡಾ.ವಿಕ್ರಮ ಬಿರಾದಾರ, ಡಾ. ಬೌರಮ್ಮ ಗಂಜಾರ. ಡಾ.ವಿಜಯಲಕ್ಷ್ಮೀ ಪಾಟೀಲ ಸೇರಿದಂತೆ ಇತರರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X