ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸೇರಿದಂತೆ ಮಾದಿಗ ಸಮೂದಾಯದ ಅನೇಕ ಮುಖಂಡರುಗಳಿಗೆ ಡಿ.17ರಂದು ನಗರದ ವಾಲ್ಕಟ್ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ನಗರಸಭೆ ಹಿರಿಯ ಸದಸ್ಯ ಜಯಣ್ಣತಿಳಿಸಿದ್ದಾರೆ.
ಮಾದ್ಯಮಗೋಷ್ಟಿ ಉದ್ದೇಶಿಸಿಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಆಗಮಿಸಿ ಆಹಾರ ಸಚಿವರಾಗಿರುವ ಕೆ.ಎಚ್. ಮುನಿಯಪ್ಪ, ಇವರು ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಆಶ್ರಯದಲ್ಲಿ ಮಾದಿಗ ಸಮೂದಾಯದಿಂದ ಅಭಿನಂದನಾ ಸಮಾರಂಭ ನಡೆಯಲಿದೆ. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜ, ಮಾಜಿ ಸಚಿವ ಎಚ್.ಆಂಜಿನಯ್ಯ, ನೂತನ ವಿಧಾನ ಪರಿಷತ್ ಸದಸ್ಯ ಸುಧಾಮ ದಾಸ್, ಮಾಜಿ ಸಂಸದ ಚಂದ್ರಪ್ಪ ಸೇರಿದಂತೆ ಮಾದಿಗ ಸಮುದಾಯ ನಾಯಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕಗಳ ಮುಖಂಡರು, ಪಕ್ಷದ ಕಾರ್ಯಕರ್ತರು, ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದು, ಅಭಿನಂದನಾ ಸಮಾರಂಭ ದಿನದಂದೇ ನಡೆಯಲಿರುವ ಮಾದಿಗ ಮನ್ನಲೆ ಆತ್ಮಗೌರವ ಸಮಾವೇಶ ಕಾರ್ಯಕ್ರಮಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಮಣ್ಣ ಇರಬಗೇರಾ, ಬಾಲಸ್ವಾಮಿ ಕೊಡ್ಲಿ, ನರಸಿಂಹಲು ಮಾಡಿಗಿರಿ, ಪಿ. ಅಮರೇಶ, ಚಂದ್ರಶೇಖರ ಕುರ್ಡಿ, ಆಂಜಿನೇಯ್ಯ ಕುರಬದೊಡ್ಡಿ, ನಗರಸರೆಡ್ಡಿ, ಶಂಕರ ಹೊಸೂರು, ಈರಣ್ಣ ಭಂಡಾರಿ ಸೇರಿದಂತೆ ಇತರರು ಇದ್ದರು.