ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣ: 5 ಮಂದಿಯ ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ

Date:

Advertisements

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯೋರ್ವರನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಅಮಾನವೀಯ ಘಟನೆಗೆ ಸಂಬಂಧಿಸಿ ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ‘ಘಟನೆ ನಾಚಿಕೆಗೇಡು’ ಎಂದು ಖಂಡಿಸಿದ್ದಾರೆ.

ಅಲ್ಲದೇ, ಈ ಸಂಬಂಧ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

“ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮಹಿಳೆಯರ ಮೇಲೆ ಇಂತಹ ಘೋರ ಅಪರಾಧಗಳು ನಿಯಮಿತವಾಗಿ ನಡೆಯುತ್ತಿವೆ. ಇಂತಹ ಅಪರಾಧಗಳನ್ನು ದೇಶದ ಎಲ್ಲೆಡೆ ಕಾಂಗ್ರೆಸ್ ಸರ್ಕಾರ ತಡೆಗಟ್ಟುವಲ್ಲಿ ತನ್ನ ಬೇಜವಾಬ್ದಾರಿಯನ್ನು ತೋರಿಸಿದೆ” ಎಂದು ವಾಗ್ದಾಳಿಗೈದಿದ್ದಾರೆ.

Advertisements

ಸಮಿತಿಯಲ್ಲಿ ಸಂಸದೆಯರಾದ ಅಪ್ರಜಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಅವರನ್ನು ಆಯ್ಕೆ ಮಾಡಿರುವುದಾಗಿ ಜೆ ಪಿ ನಡ್ಡಾ ತಿಳಿಸಿದ್ದಾರೆ.

ಇದೇ ಘಟನೆ ವಿರೋಧಿಸಿ ಕರ್ನಾಟಕದ ಬಿಜೆಪಿ ಸಂಸದರು ಶುಕ್ರವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

“ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ವಿನಾಕಾರಣ ಎಸ್‌ಸಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ, ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಸ್ ಸಿ, ಎಸ್ ಟಿ ಮಹಿಳೆಯರಿಗೆ ಭದ್ರತೆ ನೀಡುತ್ತಿಲ್ಲ” ಎಂದು ಬಿಜೆಪಿ ನಾಯಕ, ಸಂಸದ ಡಿ.ವಿ. ಸದಾನಂದಗೌಡ ಆರೋಪಿಸಿದರು.

ನೆಟ್ಟಿಗರಿಂದ ಬಿಜೆಪಿ ಮುಖಂಡರಿಗೆ ಪ್ರಶ್ನೆಗಳ ಸುರಿಮಳೆ
ಜೆಪಿ ನಡ್ಡಾ ಅವರು ಹೊರಡಿಸಿರುವ ಸತ್ಯಶೋಧನಾ ಸಮಿತಿ ನೇಮಕ ಆದೇಶವನ್ನು ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಿಟಿ ರವಿ ಸೇರಿದಂತೆ ಹಲವು ಮುಖಂಡರು ಹಂಚಿಕೊಳ್ಳುತ್ತಿದ್ದಾರೆ.

ಇದನ್ನು ಪ್ರಶ್ನಿಸಿರುವ ನೆಟ್ಟಿಗರು, “ಕಳೆದ ಹಲವಾರು ತಿಂಗಳುಗಳಿಂದ ಪ್ರಕ್ಷುಬ್ದಗೊಂಡಿರುವ ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಲಾಗಿತ್ತು. ಈ ಬಗ್ಗೆ ಬಿಜೆಪಿ ನಾಯಕರ ಮೌನವೇಕೆ, ಸಂತ್ರಸ್ತೆ ಅಲ್ಲಿ ಕ್ರೈಸ್ತೆಯಾಗಿರುವುದು ಕಾರಣವೇ ಅಥವಾ ಅಲ್ಲಿ ಬಿಜೆಪಿ ಅಧಿಕಾರದಲ್ಲಿರುವುದು ಕಾರಣವೇ?” ಎಂದು ಬಿಜೆಪಿ ನಾಯಕರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಎಸೆಯುತ್ತಿದ್ದಾರೆ.

ಡಿ.16ರಂದು(ನಾಳೆ) ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಬೆಳಗಾವಿ ಘಟನೆಯನ್ನು ಖಂಡಿಸಿ ಡಿಸೆಂಬರ್ 16 ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ಎಂಟು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿರುವುದರಿಂದ ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ ಆಸ್ಪತ್ರೆಯಲ್ಲಿರುವವರನ್ನು ಭೇಟಿ ಮಾಡಿಲ್ಲ” ಎಂದು ಆರೋಪಿಸಿದ್ದಾರೆ.

ಏನಿದು ಪ್ರಕರಣ?
ಮಹಿಳೆ ಮಗ ದುಂಡಪ್ಪ ನಾಯಕ್ ಮತ್ತು ಪ್ರಿಯಾಂಕ ಓಡಿ ಹೋಗಿದ್ದರು. ಇದರಿಂದ ಕೆರಳಿದ ಪ್ರಿಯಾಂಕಾ ಕುಟುಂಬಸ್ಥರು ದುಂಡಪ್ಪ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ತಾಯಿ ಕಮಲವ್ವಳ ಬಟ್ಟೆ ಬಿಚ್ಚಿ, ಮೆರವಣಿಗೆ ನಡೆಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದರು. ಮನೆಯನ್ನ ಸಂಪೂರ್ಣವಾಗಿ ಧ್ವಂಸಗೊಳಿಸಿದ್ದರು. ಮನೆ ಮೇಲೆ ಕಲ್ಲು ತೂರಿ ಕಿಟಿಕಿ ಗಾಜು ಪುಡಿಪುಡಿ ಮಾಡಿದ್ದರು. ಮನೆಯ ಮೇಲ್ಛಾವಣಿಯನ್ನೂ ಹಾನಿ ಮಾಡಿದ್ದರು. ಘಟನೆ ಬಳಿಕ ಗಾಯಾಳು ಕಮಲವ್ವರನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

“ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ನಡುವೆ ನಿನ್ನೆ(ಡಿ.14) ಹೈಕೋರ್ಟ್‌, “ದ್ರೌಪದಿಯ ವಸ್ತ್ರಾಪಹರಣದಿಂದ ಪಾರು ಮಾಡಲು ಕೃಷ್ಣನಿದ್ದ, ಇಲ್ಲಿ ಯಾರಿದ್ದಾರೆ?” ಎಂದು ಕಿಡಿಕಾರಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X