ರೈತ ಉತ್ಪಾದಕ ಸಂಘಗಳಿಗೆ 2 ಕೋಟಿ ರೂ. ಅನುದಾನ: ಸಚಿವ ಎಂ ಸಿ ಸುಧಾಕರ್

Date:

Advertisements

ಸಮಗ್ರ ತೋಟಗಾರಿಕೆ ಯೋಜನೆಯಡಿ ರೈತ ಉತ್ಪಾದಕ ಸಂಸ್ಥೆಗಳಿಗೆ ಆರಂಭಿಕವಾಗಿ ಪ್ರೋತ್ಸಾಹ ನೀಡಲು 2022-23ನೇ ಸಾಲಿನಲ್ಲಿ 2.73 ಕೋಟಿ ರೂ. ಬಿಡುಗಡಿ ಮಾಡಲಾಗಿದೆ ಹಾಗೂ 2023-24ನೇ ಸಾಲಿನಲ್ಲಿ 2 ಕೋಟಿ ರೂ. ಅನುದಾನ ಮೀಸಲು ಇರಿಸಲಾಗಿದೆ ಎಂದು ಉತನ್ನ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಹೇಳಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲ್ ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಪರವಾಗಿ ಉತ್ತರಿಸಿದರು.

“ರೈತರ ಬೆಳೆಗಳನ್ನು ಸಂಸ್ಕರಿಸಿ ನೇರವಾಗಿ ಗ್ರಾಹಕರಿಗೆ ತಲುಪಿಸಲು ರೈತ ಉತ್ಪಾದಕ ಸಂಸ್ಥೆಗಳು ಸಹಕಾರಿಯಾಗಿವೆ. ರೈತರು ಉತ್ಪಾದಕ ಸಂಸ್ಥೆಗಳನ್ನು ರಚಿಸಿಕೊಳ್ಳಲು ಆರಂಭದಲ್ಲಿ ಸರ್ಕಾರದಿಂದ, ಸಂಗ್ರಹಣೆ, ಸಂಸ್ಕರಣೆ, ಮತ್ತು ಶೇಖರಣೆ ಘಟಕ ನಿರ್ಮಾಣ, ಯಂತ್ರೋಪಕರಣ ಹಾಗೂ ಇತರೆ ಮೂಲ ಸೌಕರ್ಯಗಳಿಗೆ ಆರ್ಥಿಕ ಸಹಾಯಕ ಒದಗಿಸಲಾಗುವುದು. ರಾಜ್ಯದಲ್ಲಿ 1262 ರೈತ ಉತ್ಪಾದಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ” ಎಂದರು.

Advertisements

ಶಾಸಕ ಸುನೀಲ್ ಕುಮಾರ್ ಮಾತನಾಡಿ, “ರೈತ ಉಪಯೋಗಿ ಯೋಜನೆ ಅನುಷ್ಠಾನಗಳು ವಿಳಂಬವಾಗುತ್ತಿವೆ ಇದರ ಬಗ್ಗೆ ಸರ್ಕಾರ ಗಮನ ಹರಿಸಬೇಕು. ರಾಜ್ಯದಲ್ಲಿರುವ 1262 ರೈತ ಉತ್ಪಾದಕ ಸಂಸ್ಥೆಗಳಿಗೆ ಸರ್ಕಾರ ಮೀಸಲು ಇರಿಸಿದ ಅನುದಾನ ಸಾಲುವುದಿಲ್ಲ. ಸರ್ಕಾರ ಅನುದಾನವನ್ನು ಹೆಚ್ಚಿಸುವಂತೆ” ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, “ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರೈತ ಉತ್ಪಾದಕ ಸಂಸ್ಥೆಗಳಿಗೆ ಸರ್ಕಾರದಿಂದ ವ್ಯಾಪಾರ ಹಾಗೂ ರಪ್ತು ಪರವಾನಿಗೆಯನ್ನು ನೀಡುವಂತೆ” ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X