ಮಹಿಳೆಯ ವಿವಸ್ತ್ರ ಪ್ರಕರಣ | ಸಂತ್ರಸ್ತೆಯನ್ನು ಭೇಟಿಯಾದ ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಬಿಜೆಪಿ ನಿಯೋಗ

Date:

Advertisements

ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣದ ಮಾಹಿತಿ ಪಡೆಯಲು ಬೆಳಗಾವಿ ಜಿಲ್ಲಾಸ್ಪತ್ರೆಗೆ ಶನಿವಾರ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಭೇಟಿ ನೀಡಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಿತು.

ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಕೊಂಗಡುಪ್ ನೇತೃತ್ವದ ತಂಡ ಭೇಟಿ ನೀಡಿದ್ದು, ಮಹಿಳೆಗೆ ಸಾಂತ್ವನ ಹೇಳಿತು. ಜತೆಗೆ ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿತು.

ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್ ಕಮಿಷನರ್ ಎಸ್.ಎನ್.ಸಿದ್ದರಾಮಪ್ಪ, ಡಿಸಿಪಿ ರೋಹನ್ ಜಗದೀಶ, ಎಸಿಪಿ ಎಸಿಪಿ ನಾರಾಯಣ ಭರಮನಿ ಸೇರಿದಂತೆ ಇತರರು ಇದ್ದರು.

Advertisements

ಆಸ್ಪತ್ರೆಗೆ ಭೇಟಿ ನೀಡಿದ ದೆಹಲಿ ಬಿಜೆಪಿ ನಿಯೋಗ

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ದೆಹಲಿ ಬಿಜೆಪಿ ನಿಯೋಗ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದೆ.

ಬಿಜೆಪಿ ಸತ್ಯ ಶೋಧನಾ ತಂಡದಲ್ಲಿ ಸಂಸದರಾದ ಅಪರಾಜಿತ್ ಸಾರಂಗಿ, ಸುನೀತಾ ದುಗ್ಗಲ್, ರಂಜಿತಾ ಕೋಳಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಕ್ರಾ ಇದ್ದಾರೆ. ಸದ್ಯ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಿಯೋಗ ಬಳಿಕ ಘಟನಾ ಸ್ಥಳ ವಂಟಮೂರಿ ಹಾಗೂ ಕಾಕತಿ ಪೊಲೀಸ್ ಠಾಣೆಗೆ ಭೇಟಿ ನೀಡಲಿದೆ.

ಬಿಮ್ಸ್ ಆಸ್ಪತ್ರೆಗೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ ಹಿನ್ನೆಲೆ ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್‌ಗೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಎಪಿಎಂಸಿ ಠಾಣೆಯ ಸಿಪಿಐ, ಮಹಿಳಾ ಪಿಎಸ್ಐ, ಸಿಬ್ಬಂದಿಯಿಂದ ಭದ್ರತೆ ಕಲ್ಪಿಸಲಾಗಿದೆ.

ಬಿಜೆಪಿ ನಿಯೋಗ

ಬಿಜೆಪಿ ಪ್ರತಿಭಟನೆ ಕರೆ, ಎಚ್ಚೆತ್ತ ರಾಜ್ಯ ಸರ್ಕಾರ

ಪ್ರಕರಣ ಸಂಬಂಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ಕೊಡುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸಂಜೆಯೇ ಸಂತ್ರಸ್ತ ಮಹಿಳೆಗೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಐವತ್ತು ಸಾವಿರ ರೂ. ಪರಿಹಾರ ಘೋಷಿಸಿದೆ.

ಘಟನೆ ನಡೆದ ಗ್ರಾಮಕ್ಕೆ ನಿನ್ನೆ ಸಂಜೆ ಸ್ಥಳೀಯ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಕುಟುಂಬಸ್ಥರಿಂದ ಮಾಹಿತಿ ಪಡೆದರು. ಇದರ ಬೆನ್ನಲ್ಲೇ ತಡವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಕಾಕತಿ ಠಾಣೆಯ ಪೊಲೀಸ್ ಇನ್​ಸ್ಪೆಕ್ಟರ್​ ವಿಜಯ್ ಸಿನ್ನೂರ್ ಅವರನ್ನು ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅಮಾನತು ಮಾಡಿ ಆದೇಶಿಸಿದ್ದಾರೆ.

ಕಣ್ಣೀರಿಟ್ಟ ಸಂತ್ರಸ್ತೆ ಮಹಿಳೆ

ಘಟನೆ ಕುರಿತು ಸಂತ್ರಸ್ತ ಮಹಿಳೆಯಿಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಅವರು ಮಾಹಿತಿ ಕಲೆ ಹಾಕುತ್ತಿದ್ದಾರೆ. ರವಿವಾರ ರಾತ್ರಿ ಹೇಗೆ ಘಟನೆ ಸಂಭವಿಸಿತು ಅನ್ನೋದನ್ನ ವಿವರಿಸುತ್ತಿದ್ದಾಗ ಸಂತ್ರಸ್ತೆ ಮಹಿಳೆ ಕಣ್ಣೀರು ಹಾಕಿದರು. ಘಟನೆಯ ದಿನ ಪೊಲೀಸರು ಬರದೇ ಇದ್ದಿದ್ದರೆ ಕೊಂದೇ ಬಿಡುತ್ತಿದ್ದರು ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X