ಮೈಸೂರು| ಬೇನಾಮಿ ಆಸ್ತಿ ಖರಿದಿದಾರರ ವಿರುದ್ಧ ಕ್ರಮಕ್ಕೆ ರೈತರ ಆಗ್ರಹ

Date:

Advertisements

ಬೇನಾಮಿ ಆಸ್ತಿ ಖರೀದಿದಾರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರು ತಾಲುಕಿನ ಕೋಚನಹಳ್ಳಿ ಗ್ರಾಮದ ಭೂಮಿ ಕಳೆದುಕೊಂಡ ರೈತರು ಮೈಸೂರಿಗೆ ಕಾಲ್ನಡಿಗೆ ಜಾಥಾ ನಡೆಸಿದ್ದಾರೆ. ಸುಮಾರು 965 ದಿನಗಳಿಂದ ಹೋರಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತರು ಆರೋಪಿಸಿದ್ದಾರೆ.

ಕೋಚನಹಳ್ಳಿಯಲ್ಲಿ ಕೆಲವರು ಬೇನಾಮಿ ಆಸ್ತಿ ಖರೀದಿಸಿದ್ದಾರೆ. ಇದರಿಂದಾಗಿ ನಾವು ಭುಮಿ ಕಳೆದುಕೊಂಡಿದ್ದೇವೆ. ನಮಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿ ರೈತರು ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಆದರೂ, ಸರ್ಕಾರವಾಗಲೀ, ಅಧಿಕಾರಿಗಳಾಗಲೀ ಸ್ಪಂದಿಸಿಲ್ಲವೆಂದು ರೈತ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ರೈತಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ನೇತೃತ್ವದಲ್ಲಿ ಶುಕ್ರವಾರ ಮೈಸೂರಿನ ಎಸ್‌ಪಿ ಕಚೇರಿಗೆ ಕಾಲ್ನಡಿಗೆ ಜಾಥಾ ಆರಂಭಿಸಿದ್ದರು. ಜಾಥಾ ಕಡಕೊಳ ತಲುಪುವಷ್ಟರಲ್ಲಿ ರೈತರನ್ನು ಭೇಟಿ ಮಾಡಿದ ಮೈಸೂರು ಗ್ರಾಮಾಂತರ ಡಿವೈಎಸ್‌ಪಿ ಕರೀಮ್ ರಾವತ್ ಮತ್ತು ಇನ್‌ಸ್ಪೆಕ್ಟರ್‌ ಶೇಖರ್ ಸಭೆ ನಡೆಸುವುದಾಗಿ ಮನವೊಲಿಸಿ ಕಡಕೊಳ ಉಪ ಪೊಲೀಸ್ ಠಾಣೆಗೆ ರೈತ ಮುಖಂಡರನ್ನು ಕರೆದೊಯ್ದರು.

Advertisements

ಠಾಣೆಯಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿದ ಪೊಲೀಸರು, “ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಬೇನಾಮಿ ಆಸ್ತಿ ಖರೀದಿದಾರರ ವಿರುದ್ಧ ಎಫ್‌ಐಅರ್‌ ದಾಖಲಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಪೊಲೀಸರ ಮನವೊಲಿಕೆಯಿಂದ ಕಾಲ್ನಡಿಗೆ ಜಾಥಾವನ್ನು ರೈತರು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಚಂದ್ರಶೇಖರ್ ಮೇಟಿ, ಉಗ್ರ ನರಸಿಂಹ ಗೌಡ, ಬೊಕ್ಕಳ್ಳಿ ನಂಜುಂಡಸ್ವಾಮಿ, ಪಿ ಮರಂಕಯ್ಯ, ಮಂಡಕಳ್ಳಿ ಮಹೇಶ್, ಶ್ರೀಮತಿ ನೇತ್ರಾವತಿ, ರಾಘವೇಂದ್ರ, ಚಂದ್ರಶೇಖರ, ಮಹೇಶ್,ಮುದ್ದು ರಾಜು,ಜೆ, ಸ್ವಾಮಿ, ಚಲುವರಾಜು, ಇನ್ನು ಹಲವಾರು ಮುಖಂಡರು ಪಾಲ್ಗೊಂಡಿದ್ದರು,

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X