ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಿರುದ್ಯೋಗ ನೀತಿ ಕಾರಣ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸುದ್ದಿ ಮಾಧ್ಯದೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಸಂಸತ್ತಿನ ಭದ್ರತಾ ಲೋಪಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನಿರುದ್ಯೋಗ ನೀತಿ ಮತ್ತು ಹಣದುಬ್ಬರ ಕಾರಣ. ಪ್ರಧಾನಿ ನರೇಂದ್ರ ಮೋದಿಯವರ ನೀತಿಯಿಂದಾಗಿ ದೇಶದ ನಾಗರಿಕರಿಗೆ ಉದ್ಯೋಗ ಸಿಗುತ್ತಿಲ್ಲ. ಭದ್ರತಾ ಉಲ್ಲಂಘನೆ ಸಂಭವಿಸಲು ನಿರುದ್ಯೋಗ ಕಾರಣ ಎಂದು ಹೇಳಿದರು.
ಭಾರತೀಯ ಜನಸಂಖ್ಯೆಯು ಪ್ರಸ್ತುತ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ನಿರುದ್ಯೋಗ. ಭದ್ರತಾ ಉಲ್ಲಂಘನೆಯು ನಿಜವಾಗಿಯೂ ಸಂಭವಿಸಿದೆ. ಆದರೆ ಅದು ಏಕೆ ಸಂಭವಿಸಿತು ಎಂದರೆ ಇದಕ್ಕೆ ಮುಖ್ಯ ಕಾರಣ ನಿರುದ್ಯೋಗ. ಮೋದಿಯವರ ನೀತಿಗಳಿಂದಾಗಿ, ಭಾರತದ ಜನರಿಗೆ ಉದ್ಯೋಗ ಸಿಗುತ್ತಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಟ್ಟು ಅಂಗವೈಕಲ್ಯವಲ್ಲ; ಸ್ಮೃತಿ ಇರಾನಿ ಹೇಳಿಕೆ ಯಾರನ್ನು ಮೆಚ್ಚಿಸಲು?
ಗುರುವಾರ (ಡಿ.13) ಸಂಸತ್ತಿನ ಪ್ರಮುಖ ಭದ್ರತಾ ಉಲ್ಲಂಘನೆಯಲ್ಲಿ, ಇಬ್ಬರು ವ್ಯಕ್ತಿಗಳು ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಸದನಕ್ಕೆ ಹಾರಿ ಬಣ್ಣದ ಹೊಗೆಯನ್ನು ಹತ್ತಿಸಿದರು. ಇನ್ನೊಂದು ಘಟನೆಯಲ್ಲಿ ಸಂಸತ್ತಿನ ಆವರಣದಲ್ಲಿ ಮತ್ತಿಬ್ಬರು ಬಣ್ಣದ ಹೊಗೆ ಬಿಡುಗಡೆ ಮಾಡುವುದರೊಂದಿಗೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಭದ್ರತಾ ಉಲ್ಲಂಘನೆಯ ಘಟನೆಯ ಒಂದು ದಿನದ ನಂತರ, ಈ ವಿಷಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ಪ್ರತಿಭಟಿಸಿದ ಕಾರಣ ಸಂಸತ್ತಿನಲ್ಲಿ ಅವ್ಯವಸ್ಥೆ ಉಂಟಾಯಿತು. ಉಭಯ ಸದನಗಳ ಹದಿನಾಲ್ಕು ವಿರೋಧ ಪಕ್ಷದ ಸಂಸದರನ್ನು ಅಶಿಸ್ತಿನ ವರ್ತನೆಯಡಿ ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅಮಾನತುಗೊಳಿಸಲಾಯಿತು.