ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಶುಭಾ ಕಲ್ಯಾಣ್ ಶುಕ್ರವಾರ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (ಇ-ಗೌರ್ನೆಸ್ಸ್) ನಿರ್ದೇಶಕರಾಗಿ ಕಾರ್ಯನಿರ್ವಹಿಸುತಿದ್ದ ಶುಭಾ ಕಲ್ಯಾಣ್ ಈ ಹಿಂದೆ ತುಮಕೂರು ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿ ಕಾರ್ಯ ನಿರ್ವಹಿಸಿದ್ದರು.
ಶುಭಾ ಕಲ್ಯಾಣ್ ಅವರು ಈ ಹಿಂದೆ ತುಮಕೂರು ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವಧಿಯಲ್ಲಿ ಉತ್ತಮ ಹೆಸರು ಪಡೆದಿದ್ದರು. ಅವರ ಅವಧಿಯಲ್ಲಿ ನರೇಗಾ ಸೇರಿದಂತೆ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದ್ದರು.ಅಧಿಕಾರಿಗಳು , ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಉತ್ತಮ ಹೆಸರು ಪಡೆದಿದ್ದರು.