ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಗಳ ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಅತಿಥಿ ಉಪನ್ಯಾಸಕರು ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. ನಂತರ ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು.
“ರಾಜ್ಯಾದ್ಯಂತ 430 ಪ್ರಥಮ ದರ್ಜೆ ಮಹಾವಿದ್ಯಾಲಯಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರು ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ, ಕಾಯಂಗೊಳಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು, ಉಪನ್ಯಾಸಕರು ತರಗತಿಯನ್ನು ಬಹಿಷ್ಕರಿಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತಿದೆ” ಎಂದು ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.
“ಸುವರ್ಣ ಸೌಧ ಮುಂದೆ ಹೋರಾಟ ನಡೆಸಿದಾಗ ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ, ಆದರೆ ಇದುವರೆಗೂ ಯಾವುದೇ ಮಾತುಕತೆ ನಡೆಸಿಲ್ಲ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಗಳ ಅತಿಥಿ ಉಪನ್ಯಾಸರನ್ನು ಕಾಯಂಗೊಳಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ರಾಮ ಮಂದಿರ ಕಟ್ಟುವುದರಿಂದ ಉದ್ಯೋಗ, ಶಿಕ್ಷಣ ಸಿಗುತ್ತಾ?: ಮಾವಳ್ಳಿ ಶಂಕರ
ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಹೊಸಪೇಟೆ, ಪ್ರಧಾನ ಕಾರ್ಯದರ್ಶಿ ಹನುಮಂತ ಕುರಡಿ, ಈರಣ್ಣ ಗಟ್ಟು ಬಿಚ್ಚಾಲಿ, ಶರಣ ವಸವ ಮದ್ಲಾಪೂರ, ವಿಶ್ವನಾಥ ಪಾಟೀಲ್, ಚಂದ್ರಶೇಖರ ಅಕ್ಕರಕಿ, ಸುರೇಶ ಬಳಗನೂರು, ಮಹಾದೇವಪ್ಪ, ದೇವರಾಜ, ಶರಣ ಬಸವ ಬೆಟ್ಟದೂರು, ಸೇರಿದಂತೆ ಇತರರಿದ್ದರು .
ವರದಿ : ಹಫೀಜುಲ್ಲ