ದಾವಣಗೆರೆ | ಕಾರ್ಮಿಕ ಕಾಯ್ದೆಯನ್ನು ಕಾರ್ಮಿಕರು ಅರಿಯಬೇಕು: ನ್ಯಾ. ರಾಜೇಶ್ವರಿ ಹೆಗಡೆ

Date:

Advertisements

ರಾಷ್ಟ್ರದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಹಲವು ಕಾಯ್ದೆ ಮತ್ತು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಕಾರ್ಮಿಕರು ಸಂಘಟಿತರಾಗುವ ಮೂಲಕ ಅವುಗಳ ಪ್ರಯೋಜನಗಳನ್ನು ಪಡೆದು ಕೊಳ್ಳಬೇಕೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್ ಹೆಗಡೆ ಹೇಳಿದ್ದಾರೆ.

ದಾವಣಗೆರೆಯಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕಾರ್ಮಿಕರ ಸಂಘ ಹಾಗೂ ಎಐಟಿಯುಸಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಭಾರತದಲ್ಲಿ ಶೇ.90ಕ್ಕೂ ಹೆಚ್ಚು ಕಾರ್ಮಿಕರು ಅಸಂಘಟಿತ ವಲಯದಲ್ಲಿ ಉದ್ಯೋಗಿಗಳಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಕೃಷಿ ಕಾರ್ಮಿಕರು, ಕಟ್ಟಡ ಗುತ್ತಿಗೆದಾರರು, ಗೃಹ ಕೆಲಸ ಮತ್ತು ಸಣ್ಣ ಪ್ರಮಾಣದ ಉದ್ಯಮಗಳು ಸೇರಿದಂತೆ ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಈ ವರ್ಗಕ್ಕೆ ಸೇರಿಸಲಾಗಿದೆ” ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಮಾತನಾಡಿ, “ಕೃಷಿ ಕಾರ್ಮಿಕರು ಇ-ಶ್ರಮ್ ಕಾರ್ಡ್‌ಗಳನ್ನು ನೊಂದಣಿ ಮಾಡಿಸಿಕೊಳ್ಳುವ ಮೂಲಕ ಅದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು. ದೇಶದ ಪ್ರಗತಿಗೆ ಅಸಂಘಟಿತ ಕಾರ್ಮಿಕರ ಶ್ರಮವೂ ಕಾರಣವಾಗಿದ್ದು, ಅವರ ಶ್ರಮಕ್ಕೆ ತಕ್ಕಂತೆ ಅವರಿಗೆ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದರು.

Advertisements

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್. ಹೆಚ್. ಅರುಣ್‌ ಕುಮಾರ್ ಮಾತನಾಡಿ, “ಕಾರ್ಮಿಕ ಇಲಾಖೆಯು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕಾರ್ಮಿಕ ಸಂಘಟನೆಗಳ ಜೊತೆಗೂಡಿ ಜನರ ಮನೆಬಾಗಿಲಿಗೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವನ್ನು ಮೂಡಿಸಿ ಅವರನ್ನು ನೊಂದಣಿ ಮಾಡಿಸಿ, ಫಲಾನುಭವಿಗಳಾಗಲು ಶ್ರಮಿಸುತ್ತಿರುವುದು ತುಂಬಾ ಶ್ಲಾಘನೀಯ ಕಾರ್ಯ” ಎಂದು ಪ್ರಶಂಸಿಸಿದರು.

ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘದ ರಾಜ್ಯಾಧ್ಯಕ್ಷ ಹೆಚ್.ಜಿ. ಉಮೇಶ್ ಅವರಗೆರೆ ಮಾತನಾಡಿ, “ಕಾರ್ಮಿಕ ಸಂಘಟನೆಯು ಕಾರ್ಮಿಕ ಇಲಾಖೆಯ ಜೊತೆಗೂಡಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ ಮಾಡುತ್ತಿದೆ. ಆ ಮೂಲಕ ಸಮ ಸಮಾಜದ ಆಶಯವನ್ನು ಸಾಕಾರಗೊಳಿಸಲಾಗುತ್ತಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ವೀಣಾ ಎಸ್. ಆರ್. ಜಿಲ್ಲಾ ವಕೀಲರ ಸಂಘದ ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ಮಾಜಿ ಮೇಯರ್ ಜಯಮ್ಮ ಗೋಪಿನಾಥ್, ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ವಿ. ಲಕ್ಷಣ್, ಜಿಲ್ಲಾ ಕಾರ್ಮಿಕ ಅಧಿಕಾರಿ ಇಬ್ರಾಹಿಂ, ಬಸವನಗೌಡ ಬಡಾವಣೆಯ ನಿವಾಸಿಗಳಾದ ವಕೀಲರಾದ ಮಂಜುನಾಥ್, ವಿಜಯಕುಮಾರ್ ಡಿ.ಎಸ್., ಮನೋಜ್ ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X