ರಾಜ್ಯದಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ತರಗತಿಗಳು ಸಂಗಮವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕೆಂದು ಎಬಿವಿಪಿ ಆಗ್ರಹಿಸಿದೆ.
ಹುಮನಾಬಾದ್ ತಾಲೂಕು ಎಬಿವಿಪಿ ಶಾಖೆಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖಾಂತರ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.
“ನ.23 ರಿಂದ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ರಾಜ್ಯದಂತ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದಾಗಿ ಪದವಿ ವಿದ್ಯಾರ್ಥಿಗಳ ತರಗತಿಗಳು ಸರಿಯಾಗಿ ನಡೆಯದ ಕಾರಣ ಶೈಕ್ಷಣಿಕ ಹಿನ್ನಡೆ ಯಾಗುತ್ತಿದ್ದು, ಪರೀಕ್ಷೆ ಹೇಗೆ ಬರೆಯಬೇಕು ಎಂಬ ಆತಂಕ ಕಾಡುತ್ತಿದೆ” ಎಂದು ಹೇಳಿದರು.
ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಗೌರವಯುತ ಜೀವನ ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿವೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಯಾವುದೇ ರೀತಿಯ ವಿಳಂಬ ಮಾಡದೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡುವುದು ಸೇರಿದಂತೆ ಎಲ್ಲಾ ಬೇಡಿಕೆ ಈಡೇರಿಸಬೇಕೆಂದು ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಒತ್ತಾಯಿಸಿದರು.
ಬೇಡಿಕೆಗಳು :
1.ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡುವುದು.
2.ಸರಕಾರಿ ನೌಕರರಿಗೆ ನೀಡುವ ರೀತಿಯಲ್ಲಿ ಪ್ರತಿ ತಿಂಗಳು ಸಂಬಳ ನೀಡಬೇಕು.
3. ಶಾಶ್ವತ ಪರಿಹಾರವಾಗಿ ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಯನ್ನು ಕೂಡಲೇ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು.
4.ಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರವನ್ನು ಹಿಂಪಡೆದು ಪಾಠ ಪ್ರವಚನಗಳನ್ನು ಆರಂಭಿಸಬೇಕು.
ಈ ಸುದ್ದಿ ಓದಿದ್ದೀರಾ? ಬೀದರ್ | ರಾಮ ಮಂದಿರ ಕಟ್ಟುವುದರಿಂದ ಉದ್ಯೋಗ, ಶಿಕ್ಷಣ ಸಿಗುತ್ತಾ?: ಮಾವಳ್ಳಿ ಶಂಕರ
ಈ ಸಂದರ್ಭದಲ್ಲಿ ಎಬಿವಿಪಿ ಪ್ರಮುಖರಾದ ಕಾವೇರಿ ಮಠಪತಿ, ಸಿದ್ದು ಕುಂಬಾರ, ಪ್ರವೀಣ ಪಾಂಚಾಳ, ಚನ್ನು ರಾಂಪೂರೆ, ವೀರಶೆಟ್ಟಿ, ವೀಣಾ, ರಾಧಿಕಾ, ಕೌಶಲ್ಯ, ವಿಶ್ವ, ಶೇಖರ್ ಸೇರಿದಂತೆ ಇತರರಿದ್ದರು.
ವರದಿ ಮಾಹಿತಿ : ಭೀಮರೆಡ್ಡಿ ಸಿಂಧನಕೇರಾ