ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಅಸೂಕ್ಷ್ಮತೆ ಮೆರೆದ ಬಿಜೆಪಿ: ಸಿದ್ದರಾಮಯ್ಯ ವಾಗ್ದಾಳಿ

Date:

Advertisements

ರಾಜ್ಯ ಹೈಕೋರ್ಟ್‌ನ ನಿರ್ಬಂಧದ ಹೊರತಾಗಿಯೂ ದುರುಳರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಬೆಳಗಾವಿಯ ಸಂತ್ರಸ್ತ ಮಹಿಳೆಯನ್ನು ಭೇಟಿ‌ಮಾಡುವ ಮೂಲಕ ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸಿ ಅಗೌರವಿಸಿರುವುದು ಮಾತ್ರ ಅಲ್ಲ ತಮ್ಮ ಅಸೂಕ್ಷ್ಮತೆಯನ್ನು‌ ಮೆರೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಹಿಳೆಯ ವಿವಸ್ತ್ರ ಪ್ರಕರಣದ ಸಂತ್ರಸ್ತೆಯನ್ನು ಭೇಟಿ ಮಾಡದಂತೆ ಹೈಕೋರ್ಟ್‌ ನಿರ್ಬಂಧ ನೀಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, “ಸಂತ್ರಸ್ತ ಮಹಿಳೆಯು ಮಾನಸಿಕವಾಗಿ ತೀವ್ರವಾಗಿ ಜರ್ಝರಿತರಾಗಿರುವ ಹಿನ್ನೆಲೆಯಲ್ಲಿ ಹಾಗೂ ಮಾನಸಿಕ ಆಘಾತದಲ್ಲಿರುವ ಈ ಸಂದರ್ಭದಲ್ಲಿ ಆಕೆಯ ಭೇಟಿಗೆ ಅಗಮಿಸುವವರನ್ನು ನಿರ್ಬಂಧಿಸಬೇಕು ಎಂದು ಹೈಕೋರ್ಟ್ ಮುಖ್ಯನ್ಯಾಯಾಧೀಶರು ಸ್ವಯಂಪ್ರೇರಿತರಾಗಿ ಇಂದು ಬೆಳಿಗ್ಗೆ ಸೂಚಿಸಿದ್ದರು. ರಾಜಕೀಯ ನಾಯಕರು ಸಂತ್ರಸ್ತ ಮಹಿಳೆಯನ್ನು‌ ಭೇಟಿಯಾಗುವ ಸುದ್ದಿಯ ಹಿನ್ನೆಲೆಯಲ್ಲಿಯೇ ಮುಖ್ಯನ್ಯಾಯಾಧೀಶರು ಈ ಸೂಚನೆ ನೀಡಿರುವುದು‌ ಗಮನಾರ್ಹ” ಎಂದು ಹೇಳಿದ್ದಾರೆ.

“ಮಹಿಳೆಯು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ತಾನು ಭಾವಿಸುವುದಾಗಿ ಹೈಕೋರ್ಟ್ ಹೇಳಿದೆ” ಎಂದು ತಿಳಿಸಿದ್ದಾರೆ.

Advertisements

“ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು. ಹೀಗಿದ್ದರೂ ಒಂದು‌ ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ. ಸಂತ್ರಸ್ತೆಯ ಸೂಕ್ಷ್ಮ ಮಾನಸಿಕ ಸ್ಥಿತಿಯ ಬಗ್ಗೆ ಎಳ್ಳಷ್ಟೂ ಗೌರವವಿಲ್ಲದ ಸಂವೇದನಾಶೂನ್ಯ ಬಿಜೆಪಿ ನಾಯಕರು ಹಾಗೂ ಅವರ ಬೆನ್ನಿಗೆ ನಿಂತು ಚಿತಾವಣೆ ನಡೆಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಡೆ-ನುಡಿಯನ್ನು ನಾಗರಿಕ‌ ಸಮಾಜ ಖಂಡಿಸಬೇಕಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X