ಸಂತೋಷ್ ಲಾಡ್ ಅವರದ್ದು ಕಷ್ಟಕ್ಕೆ-ಬಡತನಕ್ಕೆ ಮಿಡಿಯುವ ಹೃದಯ: ಸಿಎಂ ಬಣ್ಣನೆ

Date:

Advertisements

ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ 525 ವಿಶೇಷ ಚೇತನ ಮಕ್ಕಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಿ, ಗಿಗ್ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.

ಬೆವರಿನ ಸಂಸ್ಕೃತಿಯ ಶ್ರಮಿಕರು ದೇಶದ ಸಂಪತ್ತನ್ನು ಸೃಷ್ಟಿಸುತ್ತಾರೆ. ಬಡವರ ಶ್ರಮದಿಂದ ಸೃಷ್ಟಿಯಾಗಿರುವ ದೇಶದ ಸಂಪತ್ತಿನಲ್ಲಿ ಶೇ 90 ರಷ್ಟು ಕೇವಲ 10 ಜನರ ಕೈಯಲ್ಲಿದೆ. ಇದು ತಪ್ಪು. ಶ್ರಮಿಕರ ದುಡಿಮೆಯ ಸಂಪತ್ತು ಎಲ್ಲರಲ್ಲೂ ಸಮಾನವಾಗಿ ಹಂಚಿಕೆಯಾಗಬೇಕು ಎನ್ನುವ ದೃಷ್ಟಿಯಿಂದ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ.

Advertisements

ಒಂದು ಕೋಟಿ ಮೂವತ್ತು ಲಕ್ಷ ಕುಟುಂಬಗಳಿಗೆ ಪ್ರತೀ ವರ್ಷ 50 ರಿಂದ 60 ಸಾವಿರ ರೂಪಾಯಿ ನೇರವಾಗಿ ತಲುಪುವ ವ್ಯವಸ್ಥೆಯನ್ನು ನಮ್ಮ ಸರ್ಕಾರ ಮಾಡಿದೆ. ಇದರಿಂದ ನಾಡಿನ 4 ಕೋಟಿ ರೈತರು, ಕಾರ್ಮಿಕರು, ಬಡವರಿಗೆ ಅನುಕೂಲ ಆಗುತ್ತಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಉತ್ತರದಲ್ಲಿ ನಡೆದ ಅಧಿವೇಶನದಲ್ಲಿ ಸಿಕ್ಕ ಉತ್ತರವೇನು?

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರದ್ದು ಕಷ್ಟಕ್ಕೆ, ಬಡತನಕ್ಕೆ ಮಿಡಿಯುವ ಹೃದಯ. ಈ ಕಾರಣಕ್ಕೇ ಇವರಿಗೆ ಕಾರ್ಮಿಕ ಇಲಾಖೆ ಸಚಿವರನ್ನಾಗಿ ಮಾಡಿದ್ದೇನೆ. ಸಂತೋಷ್ ಲಾಡ್ ಅವರ ಕಾಳಜಿಯಿಂದ CSR ನಿಧಿ ಮತ್ತು ಕಾರ್ಮಿಕ ಇಲಾಖೆ ಮೂಲಕ 525 ವಿಶೇಷ ಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದ್ದಾರೆ. ಇದು ನನಗೆ ಬಹಳ ಸಂತೋಷ ತಂದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಬಸವಾದಿ ಶರಣರು ಕಾಯಕ, ದಾಸೋಹ ಎಂದು ಕರೆದದ್ದು ಇದನ್ನೇ. ಉತ್ಪಾದನೆಯ ಸಮಾನ ಹಂಚಿಕೆಯೇ ಕಾಯಕ ಮತ್ತು ದಾಸೋಹ. ಇದರಿಂದ ಆರ್ಥಿಕ, ಸಾಮಾಜಿಕ ಅಸಮಾನತೆ ಅಳಿಸಬಹುದು. ಅಂಬೇಡ್ಕರ್ ಅವರೂ ಆರ್ಥಿಕ, ಸಾಮಾಜಿಕ‌ ಅಸಮಾನತೆ ತೊಡೆಯಲು ಹೋರಾಡಿದ್ದರು. ಅಸಮಾನತೆಗೆ ಸಿಲುಕಿದವರು ಪ್ರಜಾಪ್ರಭುತ್ವದ ಸೌಧವನ್ನು ನಾಶಮಾಡಬಹುದು ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ನೀಡಿದ್ದರು ಎಂದು ಸಿದ್ದರಾಮಯ್ಯ ವಿವರಿಸಿದರು.

ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು, ದುಡಿಯುವ ಶ್ರಮಿಕರಿಗೆ ಅನುಕೂಲ ಕಲ್ಪಿಸಬೇಕು ಎನ್ನುವುದು ನಮ್ಮ ಸರ್ಕಾರದ ಧ್ಯೇಯ ಎಂದರು.

ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್. ಹೆಚ್ . ಕೋನರೆಡ್ಡಿ ಸೇರಿ ಹಲವು ಗಣ್ಯರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X