ಕೊಡಗು | ಸಂಸತ್ ದಾಳಿಗೆ ನೇರ ಹೊಣೆಗಾರರಾದ ಪ್ರತಾಪ್ ಸಿಂಹ ರಾಜೀನಾಮೆ ನೀಡಲಿ; ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯ

Date:

Advertisements

ದೇಶದ ಸಂಸತ್ತಿನೊಳಗೆ ದಾಳಿ ನಡೆಸಿದ ಯುವಕರಿಗೆ ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಅದರಿಂದ ಈ ಘಟನೆಯ ನೈತಿಕ ಹೊಣೆ ಹೊತ್ತು ಪ್ರತಾಪ್ ಸಿಂಹ ಅವರು ಇನ್ನಾದರೂ ರಾಜೀನಾಮೆ ನೀಡಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಎ. ಹನೀಫ್ ಒತ್ತಾಯಿಸಿದ್ದಾರೆ.

ಈ ಕುರಿತು ಗೋಣಿಕೊಪ್ಪಲುನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಿಡಿಗೇಡಿಗಳು ನಡೆಸಿದ ಹೊಗೆ ಬಾಂಬ್ ದಾಳಿ ಇಡೀ ದೇಶವನ್ನೇ  ಆತಂಕಕ್ಕೀಡುಮಾಡಿದ್ದು, ಈ ಭದ್ರತಾ ಲೋಪ ಹೆಚ್ಚು ಆಘಾತಕಾರಿ ಘಟನೆಯಾಗಿದೆ. ಪ್ರತಾಪ್ ಸಿಂಹ ಒಬ್ಬ ಸಂಸದರಾಗಿ ಅಪರಿಚಿತರಿಗೆ ಪಾಸುಗಳನ್ನು ನೀಡಲು ಹೇಗೆ ಸಾಧ್ಯ? ಜವಾಬ್ದಾರಿಯುತ ವ್ಯಕ್ತಿಗಳು ಬೇಜವಾಬ್ದಾರಿಯಿಂದ ನಡೆಸುವ ಅನಾಹುತ ಮತ್ತು ಅದಕ್ಕೆ ಕಾರಣವಾಗುವುದು ಕೂಡಾ ಕಾನೂನಿನಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಘಟನೆ ನಡೆದ ದಿನದಂದೇ ಪ್ರತಾಪ್ ಸಿಂಹರನ್ನು ಸಂಸತ್ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕಿತ್ತು ಎಂದು ಹೇಳಿರುವ ಹನೀಫ್, ಸಂಸತ್ತಿಗೆ 22 ವರ್ಷಗಳ ಹಿಂದಿನ ಭಯೋತ್ಪಾದಕರ ದಾಳಿ ದಿನವನ್ನೇ ಆರಿಸಿಕೊಂಡು ಈ ಕೃತ್ಯ ನಡೆದಿರುವುದನ್ನು ಗಮನಿಸಿದರೆ, ಇದರ ಹಿಂದೆ ಬೇರೆ ಬಹುದೊಡ್ಡ  ಹುನ್ನಾರವಿರುವ ಶಂಕೆ ಇದೆ. ಇದು ದೇಶದ ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಎತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

Advertisements

ಮೈಸೂರು ಮೂಲದ ಮನೋರಂಜನ್ ಅವರಿಗೆ ಈ ಮೊದಲು ಪ್ರತಾಪ್ ಸಿಂಹ ಅವರೇ ಎರಡು ಬಾರಿ ಪಾಸ್ ನೀಡಿದ್ದರು ಎನ್ನಲಾಗುತ್ತಿದೆ. ಸಂಸತ್ ಸಭಾಂಗಣ ಪ್ರವೇಶಿಸಲು ಪಾಸ್ ಸ್ವೀಕರಿಸಿದ ವ್ಯಕ್ತಿ ನಡೆಸುವ ಎಲ್ಲ ಕೃತ್ಯಗಳಿಗೆ ಪಾಸ್ ಕೊಟ್ಟ ಸಂಸದರೇ ಜವಾಬ್ದಾರರಾಗಿರುತ್ತಾರೆ. ಪರಿಚಿತರಿಗಷ್ಟೇ ಪಾಸ್ ನೀಡಬೇಕು ಎಂಬ ನಿಯಮವಿದೆ. ಎಲ್ಲ ನಿಯಮಗಳನ್ನು ಪ್ರತಾಪ್ ಸಿಂಹ ಉಲ್ಲಂಘಿಸಿದ್ದಾರೆ. ಹಾಗಾಗಿ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಕೂಡಲೇ ಅಮಾನತುಪಡಿಸಿ ಎಂದು ಒತ್ತಾಯಿಸಿದರು.

ಈ ಕುರಿತು ಅವರನ್ನು ಸಮಗ್ರ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿರುವ ಹನೀಫ್, ಸಂಸತ್ತಿಗೆ ರಕ್ಷಣೆ ನೀಡಲಾಗದವರು, ಬಿಜೆಪಿಯ ನಡೆಯನ್ನು ಪ್ರಶ್ನಿಸಿದ ಸಂಸದರನ್ನು ಅಮಾನತುಗೊಳಿಸಿ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಮೂಲಕ ಪೌರುಷ ಮೆರೆಯುತ್ತಿದ್ದಾರೆ. ಕರ್ತವ್ಯ ಲೋಪದ ನೆಪದಲ್ಲಿ ಭದ್ರತಾ ಸಿಬ್ಬಂದಿ ಅಮಾನತು ಮಾಡುತ್ತಿದ್ದಾರೆ. ಆದರೆ, ಈ ಭದ್ರತಾ ವೈಫಲ್ಯಕ್ಕೆ ಮೂಲ ಕಾರಣರಾಗಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಇದುವರೆಗೂ ಏಕೆ ಕ್ರಮ ಜರುಗಿಸಿಲ್ಲ. ಪಾಸ್ ನೀಡಿದ್ದರಿಂದಲೇ ಈ ಎಲ್ಲ ಅನಾಹುತಗಳಿಗೆ ಅವರೇ ಕಾರಣವಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಆರೋಪಿಗಳಾಗಿ ಗುರುತಿಸಿಕೊಂಡಿರುವ ಮೈಸೂರು ಮೂಲದ ಮನೋರಂಜನ್, ಉತ್ತರ ಪ್ರದೇಶದ ಲಖನೌದ ಸಾಗರ್ ಶರ್ಮಾ, ಹರ್ಯಾಣದ ನೀಲಂ ಹಾಗೂ ಐಕ್ಕಿ ಶರ್ಮಾ, ಗುರುಗ್ರಾಮದ ಲಲಿತ್ ಝಾ ಮಹಾರಾಷ್ಟ್ರದ ಅಮೋಲ್ ಶಿಂಧೆ ಎಲ್ಲರೂ ಒಗ್ಗೂಡಿದ್ದು ಹೇಗೆ?  ಒಂದೂವರೆ ವರ್ಷದಿಂದ ಸಂಚು ಹೂಡಿದ್ದರೂ ಕೇಂದ್ರ ಗುಪ್ತಚರ ಇಲಾಖೆಗೆ ಗೊತ್ತಾಗಲಿಲ್ಲವೇ? ಎಂದು ಕೇಳಿರುವ ಹನೀಫ್ ಅವರು, ಈ ಕೃತ್ಯದ ಹಿಂದೆ  ದೇಶದ್ರೋಹದ ದೊಡ್ಡ ಷಡ್ಯಂತ್ರವಿದೆ. ಆದ್ದರಿಂದ ಕೃತ್ಯದ ಹಿಂದಿರುವ ಸತ್ಯಾಂಶವನ್ನು ಬಯಲಿಗೆಳೆಯಲು ಉನ್ನತ ಮಟ್ಟದ ತನಿಖೆಯಾಗಬೇಕು. ಅದಕ್ಕೂ ಮೊದಲು ಪ್ರತಾಪ್ ಸಿಂಹ ಅವರನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಜೋಕಿಂ ರಾಡ್ರಿಗಸ್, ಅಲ್ಪಸಂಖ್ಯಾತ ಘಟಕದ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೋಳುಮಂಡ ರಫೀಕ್ ಮತ್ತು ವಿರಾಜಪೇಟೆ  ನಗರ ಅಧ್ಯಕ್ಷರಾದ ಆಶೀಫ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X