ಗದಗ | ಸುರಕ್ಷತಾ ಪರಿಕರಗಳಿಲ್ಲದೆ ಖಾಸಗಿ ವ್ಯಕ್ತಿಗಳಿಂದ ಮಲದ ಗುಂಡಿ ಸ್ವಚ್ಛತೆ; ಕ್ರಮಕ್ಕೆ ಆಗ್ರಹ

Date:

Advertisements

ಗದಗ ಪಟ್ಟಣದಲ್ಲಿ ದುರ್ಗಾ ವಿಹಾರ ಹೋಟೆಲ್ ಆವರಣದಲ್ಲಿ ಯಾವುದೇ ಸುರಕ್ಷತಾ ಪರಿಕರಗಳನ್ನು ಹಾಕಿಕೊಳ್ಳದೇ ಮಲದ ಗುಂಡಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಘಟನೆ ನಡೆದಿದೆ.

ಈ ಕುರಿತು ಸಫಾಯಿ ಕರ್ಮಚಾರಿ ಜಿಲ್ಲಾ ಸಂಯೋಜಕ ರಮೇಶ ಕೋಳೂರ ಅವರು ಸಮಾಜ ಕಲ್ಯಾಣ ಇಲಾಖೆಗೆ ದೂರು‌ ನೀಡಿದ್ದಾರೆ.

ಈ ಕುರಿತು ಈ ದಿನ.ಕಾಮ್‌ನೊಂದಿಗೆ ಮಾತನಾಡಿದ ಅವರು, “ಮಲ ಹೊರುವ ಪದ್ದತಿ ನಿಷೇಧ ಕಾಯ್ದೆ-2013ರ ಪ್ರಕಾರ ಅಪರಾಧ(ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌) ಗದಗ ಜಿಲ್ಲೆಯಲ್ಲಿ ಸಾಕಷ್ಟು ಘಟಕಗಳು ನಡೆಯುತ್ತಿದ್ದು, ಅದರಲ್ಲೂ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕೋಲಾರ | ಮಕ್ಕಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ; ಪ್ರಾಂಶುಪಾಲೆ ಸಹಿತ ಮೂವರು ಅಮಾನತು

“ದುರ್ಗಾ ವಿಹಾರ ಹೋಟೆಲ್ ಆವರಣದಲ್ಲಿ ಇಬ್ಬರು ಖಾಸಗಿ ವ್ಯಕ್ತಿಗಳಿಂದ ಮಲದ ಗುಂಡಿ ಸ್ವಚ್ಛತೆ ಕೆಲಸ ಮಾಡಿಸುತ್ತಿರುವುದು ದುರಂತವೇ ಸರಿ. ಇಂತಹ ಕೆಲಸಗಳನ್ನು ಬಡ, ಕೆಳ ವರ್ಗದವರಿಂದ ಮಾಡಿಸುತ್ತಿರುವುದು ಇನ್ನೂ ದುರಂತ. ಹಾಗಾಗಿ ಎಂ ಎಸ್ ಕಾಯ್ದೆ-2013 ಪ್ರಕಾರ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X