ಅಂಗನವಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ ಕೆ ಚವ್ಹಾಣ್ ಹೇಳಿದರು.
ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಅಂಗನವಾಡಿ ಕೇಂದ್ರಗಳ ಪಾಲಕರ ಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ ಮಾತನಾಡಿ, “ಮಗಳನ್ನು ರಕ್ಷಿಸಿ, ಮಗಳನ್ನು ಓದಿಸಿ ವಿಶೇಷ ಅಭಿಯಾನದಡಿ ಪಾಲಕರಲ್ಲಿ ಮತ್ತು ಕಿಶೋರಿಯರಿಗೆ ಅರಿವು ಮೂಡಿಸಲಾಗುತ್ತಿದೆ” ಎಂದು ತಿಳಿಸಿದರು.
ಈ ಅಭಿಯಾನದಡಿ ಹೆಣ್ಣು ಮಕ್ಕಳಿಂದ ಸಸಿಗಳನ್ನು ನೆಡಿಸಿದರು. ಅಲ್ಲದೆ 6 ತಿಂಗಳ ಮಗುವಿಗೆ ಅನ್ನಪ್ರಾಶನ ಮಾಡಿಸುವ ಪ್ರಾತ್ಯಕ್ಷಿಕೆ ನೀಡಿ ತಾಯಂದಿರಿಗೆ ಅರಿವು ಮೂಡಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಮೇಲ್ವಿಚಾರಕಿ ಸಾವಿತ್ರಿ ಮಣೂರ, ಕಾರ್ಯಕರ್ತೆಯರಾದ ಬಸಮ್ಮ ಅಗಸರ, ವೈಶಾಲಿ, ಶೋಭಾ, ಬೋರಮ್ಮ, ಹಸೀನಾ, ರೇಣುಕಾ ಸೇರಿದಂತೆ ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸದಸ್ಯರು, ಪಾಲಕರು ಇದ್ದರು.