ಗದಗ |  ಭ್ರಷ್ಟಾಚಾರದ ಪ್ರಕರಣಗಳಿದ್ದರೆ ನೋಡುತ್ತಾ ಕೂರುವುದಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗದಗ ನಗರದ ಬಾಲಕಿಯರ ಬಾಲಮಂದಿರ ಕಟ್ಟಡದ ಉದ್ಘಾಟನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೆಎಸ್‌ಆರ್‌ಟಿಸಿ ನಿಗಮದಲ್ಲಿ ಸಾಕಷ್ಟು ಬಸ್‌ಗಳು ಕೆಟ್ಟು ನಿಂತಿದ್ದು, ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆಂದು ಚಾಲಕರೇ ಆರೋಪಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು” ಎಂದರು.

Advertisements

ಜಾತಿ ಜನಗಣತಿ: “ವರದಿ ಬರುವ ಮುನ್ನವೇ ವೈಜ್ಞಾನಿಕವಲ್ಲ ಎನ್ನುವುದು ಸರಿಯಲ್ಲ.
ಕಾಂತರಾಜು ವರದಿ ಇನ್ನೂ ಸಲ್ಲಿಸಿಲ್ಲವಾದ್ದರಿಂದ ಸ್ವೀಕಾರ ಮಾಡುವುದು ಹೇಗೆ?. ವರದಿ ಕೊಟ್ಟ ಮೇಲೆ ಸ್ವೀಕಾರ ಮಾಡುವ ಪ್ರಶ್ನೆ ಉದ್ಭವವಾಗುತ್ತದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೊಡಲು ಬಂದಾಗ ವಿಚಾರ ಮಾಡುತ್ತೇವೆ” ಎಂದು ಹೇಳಿದರು.

“ವರದಿ ವೈಜ್ಞಾನಿಕ ಅಲ್ಲವೆಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ. ವರದಿ ಬರಲಿ ನೋಡೋಣ. ಶ್ರೀ ಶೈಲ ಜಗದ್ಗುರು ಚನ್ನಸಿದ್ಧರಾಮ ಸ್ವಾಮೀಜಿ 2 ವರ್ಷಗಳ ನಂತರ ವರದಿ ಬಿಡುಗಡೆ ಮಾಡಲಿ ಎಂದು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರಿಗೆಯಾಗಲಿ ನನಗೇ ಆಗಲಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ವರದಿ ಬರುವ ಮುನ್ನವೇ ವೈಜ್ಞಾನಿಕವಲ್ಲ ಎನ್ನುವುದು ಸರಿಯಲ್ಲ” ಎಂದರು.

ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ: ಸಿಎಂ

ಶಕ್ತಿ ಯೋಜನೆಗೆ ಸರ್ಕಾರ ಮೀಸಲಿಟ್ಟ ಹಣ ಪೂರ್ಣಗೊಂಡಿದೆ ಎಂಬ ಬಗ್ಗೆ ಉತ್ತರಿಸಿ, “ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು. ಶಕ್ತಿ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ ಹಣವನ್ನು ಕೆಎಸ್‌ಆರ್‌ಟಿಸಿಗೆ ಸರ್ಕಾರ ತುಂಬಿ ಕೊಡಲಾಗುವುದು. ಬಸ್‌ಗಳ ದುರಸ್ತಿ ಹಾಗೂ ಹೊಸ ಬಸ್‌ಗಳ ಖರೀದಿಯೂ ಆಗಲಿದೆ. ರಿಪೇರಿಗೆ ಅನುದಾನವನ್ನು ಒದಗಿಸಲಾಗಿದೆ. ಅನುದಾನವಿಲ್ಲ ಎಂದಿರುವ ಅಧಿಕಾರಿಗಳ ಹೆಸರು ನೀಡಿದರೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸರ್ಕಾರದಲ್ಲಿ ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ಜತೆಗೆ ಯಾವುದೇ ಅಭಿವೃದ್ಧಿ ಕೆಲಸಗಳು ನಿಂತಿಲ್ಲ” ಎಂದರು.

ಕೊಟ್ಟ ಮಾತಿನಂತೆ ನಡೆದಿದ್ದೇವೆ

“ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ ₹70,814 ಕೋಟಿಯಷ್ಟು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ ₹73,928 ಕೋಟಿ ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು. 3,000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20ಕ್ಕೆ, ಬಜೆಟ್ ಮಂಡಿಸಿದ್ದು ಜುಲೈನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ. ಅಂದಿನಿಂದ 4 ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, 5ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಲಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ” ಎಂದರು.

ಕೋವಿಡ್ ಹೊಸ ತಳಿ: ಮುನ್ನೆಚ್ಚರಿಕಾ ಕ್ರಮ

“ಕೊರೊನಾ ಹೊಸ ತಳಿ ಇಡೀ ದೇಶದಲ್ಲಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರು ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ” ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

“ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಎಲ್ಲಿಗೆ ಬೇಕಾದರೂ ವಹಿಸಲು ಸಿದ್ದ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ” ಎಂದರು.

“ಕ್ಯಾಶ್ ಕಾರ್ಡ್ ಬ್ಯಾಂಕ್ ಸೊಸೈಟಿಗಳಲ್ಲಿ ರೈತರಿಗೆ ನೀಡಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಂಗನವಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಪಾಲಕರ ಪಾತ್ರ ಮುಖ್ಯ: ಕೆ ಕೆ ಚವ್ಹಾಣ್

“ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದು ಸೂತ್ರ ರೂಪಿಸುತ್ತಿದ್ದಾರೆ. ಈ ಸಂಬಂಧ ಸಭೆ ನಡೆಸಿದ ನಂತರ ಪರಿಹಾರ ಸೂತ್ರವನ್ನು ಸರ್ಕಾರಕ್ಕೆ ನೀಡುತ್ತಾರೆ. ತದನಂತರ ಸರ್ಕಾರ ಪರಿಶೀಲನೆ ನಡೆಸಲಿದೆ. ಈ ಕೆಲಸವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ” ಎಂದು ಸುದ್ದಿಗಾರರಿಗೆ ಉತ್ತರಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ, ಶಾಸಕರುಗಳಾದ ಜಿ ಎಸ್ ಪಾಟೀಲ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ‌ ಎಸ್ ನೇಮಗೌಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X