ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

Date:

Advertisements

ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರದಿಂದ ಭಾನುವಾರ ಆದೇಶ ಹೊರಡಿಸಲಾಗಿದೆ.

ನಿನ್ನೆಯೇ ಪ್ರಕರಣದ ತನಿಖೆ ಸಿಐಡಿ ಗೆ ಹಸ್ತಾಂತರಿಸಿರುವ ಸರ್ಕಾರ, ಅಧಿಕೃತವಾಗಿ ಇಂದು ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿ ಕೇಸ್‌ನ ಕಡತಗಳನ್ನು ತನಿಖಾಧಿಕಾರಿ ಹಾಗೂ ಎಸಿಪಿ ಗಿರೀಶ್ ಹಸ್ತಾಂತರಿಸಲಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗದಗದಲ್ಲಿ ಮಾತನಾಡಿದ್ದು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ‌ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ‌ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದು ಹೇಳಿದ್ದರು.

Advertisements

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಬೆಳಗಾವಿಗೆ ಆಗಮಿಸಿದ್ದು, ಡಿಎಸ್ಪಿ ಮಟ್ಟದ ಅಧಿಕಾರಿಗಳ ತಂಡದಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ನಾಳೆ ಬೆಳಗಾವಿಗೆ NHRC ಡಿಐಜಿ ಸುನೀಲ್ ಕುಮಾರ್ ಮೀನಾ ಆಗಮಿಸಲಿದ್ದು, ಈ ಹಿನ್ನೆಲೆ ಜಿಲ್ಲೆಯ ಸರ್ಕ್ಯೂಟ್ ಹೌಸ್​ನಲ್ಲೇ ಪೊಲೀಸರಿಂದ ಮಾಹಿತಿ ಪಡೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಆರೋಪಿ ಇನ್ನೂ ಏಕೆ ಶಾಸಕರಾಗಿದ್ದಾರೆ?: ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ಆಕ್ರೋಶ

ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಕರೆಸಿಕೊಂಡು ಘಟನೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಬಳಿಕ ಪೊಲೀಸರು ಏನೆಲ್ಲಾ ಮಾಡಿದ್ದಾರೆ, ಬಳಿಕ ಯಾವೆಲ್ಲ ಕ್ರಮ ಕೈಕೊಂಡಿದ್ದಾರೆ ಎಂದು ಮಾಹಿತಿ ಪಡೆದುಕೊಂಡಿದ್ದಾರೆ.

ಪ್ರಕರಣ ಕುರಿತಾಗಿ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ. ಉಳಿದ ಇಬ್ಬರಿಗೆ ಹುಡುಕಾಟ ನಡೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಹೋಗಲು ತಡ ಮಾಡಿದ್ದ ಕಾಕತಿ ಸಿಪಿಐ ವಿಜಯ್‌ ಸಿನ್ನೂರ್‌ ಅವರನ್ನ ಅಮಾನತು ಮಾಡಲಾಗಿದೆ.

ಸಂತ್ರಸ್ತೆಗೆ ನೆರವುಗಳ ಮೇಲೆ ನೆರವು ಘೋಷಣೆ ಮಾಡಲಾಗಿದೆ. ಮೊನ್ನೆಯಷ್ಟೇ ರಾಜ್ಯ ಸರ್ಕಾರ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ನಿನ್ನೆ ಜಮೀನು ಮಂಜೂರು ಮಾಡಲಾಗಿದೆ. ಸಚಿವ ಬಿ.ನಾಗೇಂದ್ರ ನಿರ್ದೇಶನ ಮೇಲೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ 2.3 ಎಕರೆ ಜಮೀನು ಕೊಡಲಾಗಿದೆ.

ಇದೇ ಘಟನೆ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಅತ್ತ ಸತ್ಯಶೋಧನಾ ಸಮಿತಿ ಸ್ಥಳದಲ್ಲಿ ಸತ್ಯ ಶೋಧನ ನಡೆಸಿದ್ದರೆ, ಇತ್ತ ಬಿಜೆಪಿ ಕಾರ್ಯಕರ್ತರು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X