ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯದ ಸತ್ಯ ಜನರಿಗೆ ಕಂಡಿದೆ: ಬಸವರಾಜ ಬೊಮ್ಮಾಯಿ

Date:

Advertisements

ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕ ಅಷ್ಟೇ ಅಲ್ಲ ಇಡಿ ಕರ್ನಾಟಕದಲ್ಲಿ ಯಾವುದೇ ಮೂಲ ಸೌಕರ್ಯಗಳ ಕಾಮಗಾರಿಗಳು ಪ್ರಾರಂಭವಾಗದಿರುವುದು ಕಟು ಸತ್ಯದ ಅನುಭವ ಜನರಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಭಿವೃದ್ಧಿ ವಿಚಾರಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಹೊಸ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಚರ್ಚೆ ಮತ್ತು ಸಮರ್ಪಕವಾಗಿ ಉತ್ತರವನ್ನು ಉತ್ತರ ಕರ್ನಾಟಕದ ಜನರು ನಿರೀಕ್ಷೆ ಮಾಡಿದ್ದರು. ಆದರೆ, ಯಾವುದೇ ಅಭಿವೃದ್ಧಿ ಪರ ನಿರ್ಣಯಗಳನ್ನು ಸರ್ಕಾರ ಘೋಷಿಸಲಿಲ್ಲ” ಎಂದಿದ್ದಾರೆ.

“ಕೃಷ್ಣಾ ಮೇಲ್ದಂಡೆ ಹಂತ 3 ರ 130 ಟಿಎಂಸಿ ನೀರು ಬಳಕೆ ಮಾಡಲು ನಮ್ಮ ಸರ್ಕಾರ ಪ್ರಾರಂಭ ಮಾಡಿರುವ ಪುನರ್ ವಸತಿ ಮತ್ತು ಪುನರ್‌ ನಿರ್ಮಾಣನಕ್ಕೆ‌ ಈ ವರ್ಷ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡಿಲ್ಲ. ಇದು ತಮ್ಮ ಸರ್ಕಾರಕ್ಕೆ ಇರುವ ಅಸಡ್ಡೆ ಭಾವನೆ ಗೊತ್ತಾಗುತ್ತದೆ. ಅದೇ ರೀತಿ ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಡಿಪಿಆರ್ ಗೆ ಅನುಮೋದನೆ ಕೊಟ್ಟಿದ್ದು ಅರಣ್ಯ ಇಲಾಖೆಯ ಅನುಮತಿ ಪಡೆಯಲು ತೆಗೆದುಕೊಂಡ ಕ್ರಮದ ಬಗ್ಗೆ ವಿವರಣೆಯನ್ನು ಕೊಡದಿರುವುದು ನೋಡಿದರೆ ತಮ್ಮ ಐದು ವರ್ಷದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳುವ ಬಗ್ಗೆ ತಮ್ಮ ಆಸಕ್ತಿ ಇಲ್ಲದಂತೆ ಕಾಣಿಸುತ್ತದೆ” ಎಂದು ಹೇಳಿದ್ದಾರೆ.

Advertisements

“ತುಂಗಭದ್ರ ಸಮತೋಲನ ಜಲಾಶಯಕ್ಕೆ ನಮ್ಮ ಸರ್ಕಾದ ಡಿಪಿಆರ್ ಮಾಡಿದೆ. ಕೂಡಲೇ ನೆರೆ ರಾಜ್ಯಗಳೊಂದಿಗೆ ಮಾತನಾಡಿ, ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇನೆ. ಉತ್ತರ ಕರ್ನಾಟಕದ ಸಾಸಲಟ್ಟಿ ಶಿವಲಿಂಗೇಶ್ವರ, ಮಂಟೂರು ಮಹಾಲಕ್ಷ್ಮೀ ಮತ್ತು ಶ್ರೀವೆಂಕಟೇಶ್ವರ ಏತ ನೀರಾವರಿ ಸೇರಿದಂತೆ ಹಲವಾರು ಏತ ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ಚಾಲನೆ ನೀಡಿದೆ ಅವುಗಳನ್ನು ಮುಂದುವರೆಸುವ ಬಗ್ಗೆ ಬಜೆಟ್ ನಲ್ಲಿ ಯಾವುದೆ ಹಣ ಮೀಸಲಿಡದಿರುವುದು ಅಧಿವೇಶನದಲ್ಲಿಯೂ ಪ್ರಸ್ತಾಪಿಸದೇ ಇರುವುದು ಹಲವಾರು ಜಿಲ್ಲೆಗಳ ನೀರಾವರಿಗೆ ಹಿನ್ನಡೆ ಆಗುವುದು ಖಚಿತ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

“ಹುಬ್ಬಳ್ಳಿಯಲ್ಲಿ ಎಫ್ ಎಂಸಿಜಿಗೆ ನಮ್ಮ ಸರ್ಕಾರ ಜಮೀನು ಮಂಜೂರು ಮಾಡಿ ವಿಶೇಷ ರಿಯಾಯ್ತಿ ನೀಡಿದೆ. ಸುಮಾರು 1 ಲಕ್ಷ ಜನರಿಗೆ ಉದ್ಯೋಗ ನೀಡುವ ಯೋಜನೆಗೆ ತಮ್ಮ ಸರ್ಕಾರ ಯಾವುದೇ ಮುಂದಿನ ಕ್ರಮ ಕೈಗೊಳ್ಳದಿರುವುದು ದುರದೃಷ್ಟಕರ. ರಾಯಚೂರಿನಲ್ಲಿ‌ ಉದ್ದೇಶಿತ ಫಾರ್ಮಾ ಪಾರ್ಕ್ ಬಗ್ಗೆಯೂ ಕೂಡ ತಮ್ಮ ಉತ್ತರದಲ್ಲಿ ತಾವು ಪ್ರಸ್ತಾಪಿಸಲಿಲ್ಲ. ವಿಜಯಪುರ ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಯ ಸಂಸ್ಕರಣ ಮತ್ತು ಶೀತಲ ಘಟಕ ಸ್ಥಾಪನೆಗೆ ನಮ್ಮ ಸರ್ಕಾರ ಇದ್ದಾಗ 100 ಕೋಟಿ ರೂ. ಮಂಜೂರು ಮಾಡಿದ್ದು ಈ ಬಗ್ಗೆ ಯಾವುದೇ ಭರವಸೆ ನೀಡದಿರುವುದು ನಿರಾಸೆಯಾಗಿದೆ” ಎಂದು ತಿಳಿಸಿದ್ದಾರೆ.

“ವಿಜಯಪುರ ವಿಮಾನ ನಿಲ್ದಾಣ ಪೂರ್ಣಗೊಳ್ಳುವ ಹಂತದಲ್ಲಿದ್ದರೂ ಕೂಡ ಈ ವರ್ಷದ ಬಜೆಟ್ ನಲ್ಲಿ ಹಣ ಮೀಸಲಿಟ್ಟಿಲ್ಲ. ಕೊಪ್ಪಳ ಮತ್ತು ರಾಯಚೂರು ವಿಮಾನ‌ನಿಲ್ದಾಣಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಇಟ್ಟ ಹಣ ಪ್ರಯೋಜನ ಪಡೆಯಲು ತಮ್ಮ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್‌ ಘೊಷಣೆ ಏನಾಯ್ತು? ಉತ್ತರ ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳಾದ ಧಾರವಾಡ- ಬೆಳಗಾವಿ, ಬಾಗಲಕೋಟೆ- ಕುಡಚಿ, ಮುಮಿರಾಬಾದ್ – ಗಿಣಿಗೆರಾ-ರಾಯಚೂರು, ಗದಗ- ವಾಡಿ ಯೋಜನೆಗಳನ್ನು ಮಾಡುವ ಮುಖಾಂತರ ಪ್ರವಾಸೋದ್ಯಮಕ್ಕೆ ಉತ್ತೇಜನ ಕೊಡಲು ಸಾಧ್ಯ. ಆದರೆ, ತಮ್ಮ ಸರ್ಕಾರದ ಯಾವುದೇ ಕ್ರಮ ಈ ದಿಕ್ಕಿನಲ್ಲಿ‌ ಕಾಣಿಸುತ್ತಿಲ್ಲ” ಎಂದು ಹೇಳಿದ್ದಾರೆ.

“ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಅಭಿವೃದ್ದಿಗೆ ಯೋಜನೆ ರೂಪಿಸಲಾಗಿದ್ದು, ಈ ಬಗ್ಗೆ ನಿಮ್ಮ ಸರ್ಕಾರ ಆಲೋಚನೆ ಮಾಡಿಲ್ಲ. ಈಗಾಗಲೇ ನಮ್ಮ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿ ಪ್ರಾರಂಭವಾಗಿರುವ ಜಯದೇವ ಹೃದ್ರೋಗ ಸಂಸ್ಥೆ ಹಾಗೂ ಬೆಳಗಾವಿಯಲ್ಲಿ ಕಿದ್ವಾಯಿ ಸಂಸ್ಥೆಗಳಿಗೆ ಅನುದಾನ ಘೋಷಣೆ ಮಾಡುತ್ತಾರೆನ್ನುವ ನಿರೀಕ್ಷೆ ಹುಸಿಯಾಗಿದೆ. ಹಾವೇರಿಯಲ್ಲಿ ಮೆಡಿಕಲ್ ಕಾಲೇಜ್ ಆರಂಭಿಸಿದ್ದು ಅಗತ್ಯ ಹಣ ಬಿಡುಗಡೆ ಮಾಡಬೇಕು. ಹಾವೇರಿ ಮೆಗಾ ಡೈರಿಗೆ ಕೂಡಲೆ ಹಣ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನೂತನ ವಿಶ್ವ ವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪ ಹೇಳಿ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಮುಂದಾಗುತ್ತಿರುವುದು ಹಿಂದುಳಿದ ಜಿಲ್ಲೆಗಳು ಮತ್ತು ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದಂತಾಗುತ್ತದೆ. ಆದ್ದರಿಂದ ನೂತನ ವಿಶ್ವ ವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪದಲ್ಲಿ ಮುಚ್ಚುವ ಪ್ರಸ್ತಾಪವನ್ನು ಕೈಬಿಡಬೇಕು” ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X