ಬೀದರ್ ತಾಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಚಿರತೆ ಪ್ರತ್ಯಕ್ಷವಾಗಿದ್ದು ಸುತ್ತಲಿನ ಗ್ರಾಮಸ್ಥರು ಎಚ್ಚರದಿಂದ ತಿರುಗಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಡಂಗುರ ಸಾರಿ ಜಾಗೃತಿ ಮೂಡಿಸಿದ್ದಾರೆ.
ಬೆಳಿಗ್ಗೆ ಹಾಗೂ ಸಾಯಂಕಾಲ ಅರಣ್ಯ ಪ್ರದೇಶದಂತೆ ತೆರಳದಂತೆ ಹೊನ್ನಿಕೇರಿ, ಖಾನಾಪುರ, ಅತಿವಾಳ ಸೇರಿದಂತೆ ಸುತ್ತಲಿನ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಕೆಲ ತಿಂಗಳ ಹಿಂದೆ ಇದೇ ಅರಣ್ಯದಲ್ಲಿ ಚಿರತೆ ಕಾಣಿಸಿಕೊಂಡಿತ್ತು, ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ಆದರೆ ಈ ಹಿಂದೆ ಪತ್ತೆಯಾಗಿದ್ದ ಚಿರತೆ ಬೇರೆ ಇತ್ತು, ಇದೇ ಬೇರೆ ಇದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.