ಕೊಡಗು | ಕೌಟುಂಬಿಕ ಹಾಕಿ ಪಂದ್ಯಾವಳಿ; 2ನೇ ಬಾರಿಗೆ ಚಾಂಪಿಯನ್ ಪಟ್ಟ ಉಳಿಸಿಕೊಂಡ ಅಪ್ಪಂಡೇರಂಡ ತಂಡ

Date:

Advertisements

ವಿರಾಜಪೇಟೆ ತಾಲೂಕಿನ ಕಂಡಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾ ಸಮಿತಿ ಆಯೋಜಿಸಿದ್ದ ಮೂರು ನಾಡು ವ್ಯಾಪ್ತಿಯ 2ನೇ ವರ್ಷದ ಕೌಟುಂಬಿಕ ಹಾಕಿ ಪಂದ್ಯಾವಳಿ ಮುಕ್ತಾಯಗೊಂಡಿದೆ. ಕಳೆದ ಬಾರಿ ಚಾಂಪಿಯನ್‌ ಆಗಿದ್ದ ಕಂಡಂಗಾಲದ ಅಪ್ಪಂಡೇರಂಡ ತಂಡ ಈ ಬಾರಿಯೂ ಗೆದ್ದು ಚಾಂಪಿಯನ್‌ ಪಟ್ಟ ಉಳಿಸಿಕೊಂಡಿದೆ.

ಸೋಮವಾರ ನಡೆದ ಫೈನಲ್ ಪಂದ್ಯಾವಳಿಯಲ್ಲಿ 5-3 ಗೋಲಿನ ಅಂತರದಿಂದ ಮದ್ರೀರ ತಂಡವನ್ನು ಮಣಿಸಿದ ಅಪ್ಪಂಡೇರಂಡ ತಂಡ ಸತತವಾಗಿ 2ನೇ ಬಾರಿಗೆ ವಿಜಯದ ಮಾಲೆಯನ್ನು ತನ್ನ ಕೊರಳಿಗೇರಿಸಿಕೊಂಡಿದೆ.

ಫೈನಲ್ಸ್ ಪಂದ್ಯದಲ್ಲಿ ಆರಂಭದಿಂದಲೇ ಬಿರುಸಿನ ಆಟಕ್ಕೆ ಒತ್ತು ನೀಡಿದ ವಿಜೇತ ಅಪ್ಪಂಡೇರಂಡ ತಂಡ ಎದುರಾಳಿ ಆಟಗಾರರ ವಿರುದ್ಧ ರಕ್ಷಣಾತ್ಮಕ ಮತ್ತು ಸಂಘಟಿತವಾದ ಆಟವಾಡಿ ಪ್ರಶಸ್ತಿ ಗೆದ್ದುಕೊಂಡಿತು. ಅಪ್ಪಂಡೇರಂಡ ತಂಡದ ಪರವಾಗಿ ಆಡಿದ ಅತಿಥಿ ಆಟಗಾರರು ಇಡೀ ಪಂದ್ಯದಕ್ಕೂ ಪ್ರೇಕ್ಷಕರ ಗಮನ ಸೆಳೆದರಲ್ಲದೆ, ತಂಡದ ವಿಜಯದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.

Advertisements

ವಿಜೇತ ತಂಡದ ಪರವಾಗಿ ಅತಿಥಿ ಆಟಗಾರರಾದ ಲಿಖಿತ್ 2 ಗೋಲು, ಆಭರಣ ಸುಧೇವ್, ನಿತಿನ್ ಮತ್ತು ಭರತ್ ತಲಾ ಒಂದು ಗೋಲು ಹೊಡೆದರು. ತಂಡದ ವಿರುದ್ಧ ದಾಖಲಾಗಬಹುದಾಗಿದ್ದ ಸಾಕಷ್ಟು ಗೋಲುಗಳನ್ನು ತಡೆಗೋಡೆಯಂತೆ ನಿಂತು ತಡೆದ ಅಪ್ಪಂಡೇರಂಡ ತಂಡದ ಗೋಲ್ ಕೀಪರ್ ಕೌಶಿಕ್ ಸುಬ್ರಮಣಿ ಪಂದ್ಯಾವಳಿಯ ಸರಣಿ ಪುರುಷೋತ್ತಮ ವಿಶೇಷ ಪ್ರಶಸ್ತಿಗೆ ಪಾತ್ರರಾದರು. ಅಪ್ಪಂಡೇರಂಡ ಯಶ್ವಂತ್ ಕಾಳಪ್ಪ ತರಬೇತಿದಾರರಾಗಿ ಮತ್ತು ಅಪ್ಪಂಡೇರಂಡ ಸುರೇಶ್ ವಿಜೇತ ತಂಡದ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X