ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರುವ ತುಮಕೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಪೌರ ಕಾರ್ಮಿಕರ ಹೆಸರಿನಲ್ಲಿ ₹25 ಲಕ್ಷ ಠೇವಣಿ ಇಡುವಂತೆ ಸೂಚಿಸಿದೆ.
ಪೌರಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಕಾರ್ಮಿಕರ ನ್ಯಾಯಾಧೀಕರಣದ ಆದೇಶ, ಪ್ರಶ್ನಿಸಿ ತುಮಕೂರು ಮಹಾನಗರ ಪಾಲಿಕೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.
ಕಾಯಂಗೊಳಿಸುವುದು, ಸಮಾನ ವೇತನ ಮತ್ತು ಇತರೆ ಸಮಾನ ಸೌಲಭ್ಯ ಕಲ್ಪಿಸುವಂತೆ ಪೌರಕಾರ್ಮಿಕರು ಕಾರ್ಮಿಕ ನ್ಯಾಯಾಧೀಕರಣದ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಕರಣವು ಕಾರ್ಮಿಕರ ಪರ ತೀರ್ಪು ನೀಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ತುಮಕೂರು ಮಹಾನಗರ ಪಾಲಿಕೆ ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ಪೌರಕಾರ್ಮಿಕರ ಹೆಸರಿನಲ್ಲಿ ಠೇವಣಿ ಇಡುವಂತೆ ಪಾಲಿಕೆಗೆ ಆದೇಶಿಸಿದೆ.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್
ಜನವರಿ ಎರಡನೇ ವಾರದ ಒಳಗೆ ಠೇವಣಿ ಆಗದಿದ್ದರೆ ಮೇಲ್ಮನವಿ ವಜಾಗೊಳಿಸಲಾಗುವುದು ಎಂದು ತಿಳಿಸಿದೆ.