ಮಕ್ಕಳಿಂದ ಶೌಚಗುಂಡಿ ಸ್ವಚ್ಛತೆ | ನ್ಯಾಯಾಧೀಶರ ತನಿಖೆಗೆ ಒಪ್ಪಿಸಿ: ಆರ್ ಅಶೋಕ

Date:

Advertisements

ವಿಪಕ್ಷ ನಾಯಕ ಆರ್. ಅಶೋಕ ಅವರು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಅಧಿಕಾರಿಗಳು, ಶಿಕ್ಷಕರು, ಮಕ್ಕಳೊಂದಿಗೆ ಘಟನೆ ಕುರಿತು ಮಾಹಿತಿ ಪಡೆದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಆರ್.ಅಶೋಕ್ ಅವರು, “ಕರ್ತವ್ಯನಿರತ ನ್ಯಾಯಾಧೀಶರಿಂದ ಈ ದುರ್ಘಟನೆಯ ಕುರಿತು ತನಿಖೆ ನಡೆಸಿ” ಎಂದು ಆಗ್ರಹಿಸಿದರು. “ಮಕ್ಕಳ ದೂರುಗಳ ವಿಲೇವಾರಿಗೆ ಸಹಾಯವಾಣಿ ಆರಂಭಿಸಬೇಕು. ನ್ಯಾಯಾಧೀಶರು ರಾಜ್ಯದ ಎಲ್ಲ ಕಡೆ ತೆರಳಿ ವರದಿ ನೀಡಿದರೆ ಸರಕಾರದ ಕಾಮಾಲೆ ಕಣ್ಣು ತೆರೆಯಲು ಸಾಧ್ಯ” ಎಂದರು.

“ಹಾಸ್ಟೆಲ್‍ನಲ್ಲಿ ಅನ್ಯಾಯ, ದೌರ್ಜನ್ಯ ಆಗುತ್ತಿದೆ. ಮ್ಯಾನ್‍ಹೋಲ್‍ಗಳು, ಶೌಚಗುಂಡಿಗೆ ಇಳಿಯುವುದು ಅಪರಾಧ. ಇದು ಆರೋಗ್ಯಕ್ಕೆ ಹಾನಿಕಾರಕ ಅಲ್ಲದೆ ವ್ಯಕ್ತಿಗೆ ಅವಮಾನ ಮಾಡಿದಂತೆ. ಅಷ್ಟಿದ್ದರೂ 1ರಂದು ಘಟನೆ ನಡೆದಿದ್ದು, ಅದನ್ನು ಮುಚ್ಚಿಹಾಕಿದ್ದಾರೆ” ಎಂದು ಟೀಕಿಸಿದರು.

Advertisements

“ಅಧಿವೇಶನದ ವೇಳೆ ಬಂದರೆ ಸರಕಾರಕ್ಕೆ ಸಮಸ್ಯೆ ಎಂದು ಅದನ್ನು ಮುಚ್ಚಿಹಾಕಿದ್ದಾರೆ. ಪ್ರಿನ್ಸಿಪಾಲ್ ಅವರ ಸೂಚನೆಯಂತೆ ಹಳ್ಳಿಯಿಂದ ಬಿದಿರು ತಂದು ಶೌಚಗುಂಡಿಗೆ ಇಳಿದು ಶುಚಿ ಮಾಡಿದ್ದಾರೆ. ಇದನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವೇ? ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಅಮಾನವೀಯ ಘಟನೆ ನಡೆದಿದೆ. ಇಲ್ಲಿ ಈ ತರಹ ಮಕ್ಕಳಿಂದ ಕಮೋಡ್, ಬಾತ್‍ರೂಂ, ಶೌಚಗುಂಡಿ ಶುಚಿಗೊಳಿಸಿದ್ದಾರೆ. ಇದು ಸರಕಾರಕ್ಕೆ ಕೆಟ್ಟ ಹೆಸರು ತರುವಂತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

“ಕಾನೂನಿನ ಭಯವೇ ಇಲ್ಲ. ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ಮಕ್ಕಳಿಗೆ ಸರಿಯಾಗಿ ಊಟ ಕೊಡುತ್ತಿರಲಿಲ್ಲ. ಚಾರ್ಟ್ ಪ್ರಕಾರ ಇಲ್ಲಿ ಸರಬರಾಜು ಮಾಡುತ್ತಿಲ್ಲ. 240 ಮಕ್ಕಳಿಗೆ 4 ಲೀಟರ್ ಹಾಲು ತರಿಸುತ್ತಿದ್ದರು ಎಂದು ಮಾಹಿತಿ ಇದೆ. ತರಕಾರಿ ಇಲ್ಲವೇ ಇಲ್ಲ; ಕೆಟ್ಟು ಹೋದ ಮೊಟ್ಟೆ ಕೊಡುತ್ತಿದ್ದರು ಎಂದು ಮಕ್ಕಳು ಹೇಳಿದ್ದಾರೆ” ಎಂದರು ಹೇಳಿದರು.

“ನಂಜನಗೂಡಿನಲ್ಲಿ ಹೊಲಕ್ಕೆ ಹೋದ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿದೆ. ಸರಕಾರಕ್ಕೆ ತಾಳ, ಮೇಳ ಇಲ್ಲ. ವರ್ಗಾವಣೆ ದಂಧೆಯಲ್ಲಿ ಅದು ತೊಡಗಿದೆ. ವಸೂಲಿ ವ್ಯವಹಾರ ನಡೆದಿದೆ. ವಿಡಿಯೋ ಮಾಡಿದ ಘಟನೆಯೂ ಇಲ್ಲಿ ಆಗಿರುವ ದೂರು ಇದೆ. ಹೆಣ್ಮಕ್ಕಳನ್ನು ಹಾಸ್ಟೆಲ್‍ಗೆ ಕಳಿಸುವುದು ಹೇಗೆ? ಇಲ್ಲಿ ಪ್ರಾಂಶುಪಾಲರು ಸೇರಿ 13 ಜನರಿಗೂ ಮನೆ ಕೊಟ್ಟಿದ್ದರೂ 3 ಜನ ಮಾತ್ರ ಇಲ್ಲಿ ಇದ್ದಾರೆ. ಉಳಿದವರು ವಿಸಿಟಿಂಗ್ ಥರ ಇದ್ದಾರೆ” ಎಂದು ಆಕ್ಷೇಪಿಸಿದರು.

“ಗುಂಪುಗಾರಿಕೆ, ದುಡ್ಡು ವಸೂಲಿ ನಡೆಯುತ್ತಿತ್ತು. ಗಾಜು ಇದ್ದ ಕಾರಣ ಶೌಚಗುಂಡಿಗೆ ಇಳಿದ ಮಕ್ಕಳಲ್ಲಿ ಒಬ್ಬರ ಕಾಲು ಕಟ್ ಆಗಿದೆ. ಶೌಚಗುಂಡಿಗೆ ಇಳಿದ ಈ ಮಕ್ಕಳ ಬಟ್ಟೆಗಳನ್ನು ಸುಟ್ಟು ಹಾಕಿದ್ದಾರೆ. ಹಲವು ಮಕ್ಕಳ ಸ್ಕಿನ್ ಅಲರ್ಜಿ ಆಗಿದೆ. ಈ ಸರಕಾರಕ್ಕೆ ಕಣ್ಣು ಇಲ್ಲ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ತೇಜಸ್ವಿನಿ ಗೌಡ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಹಾಗೂ ಮತ್ತಿತರ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X