ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಕೂಡ ಈ ಬಗ್ಗೆ ಹೇಳಿಕೆ ನೀಡಿದ್ದರು. ಆ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್, “ನನಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದ್ದಾರೆ.
“ಟಿ.ಬಿ.ಜಯಚಂದ್ರ ಅವರು ಹಿರಿಯ ನಾಯಕರು. ದೆಹಲಿ ವಿಶೇಷ ಪ್ರತಿನಿಧಿ ಅವರಿಗೆ ಈ ಬಗ್ಗೆ ಮಾಹಿತಿ ಇರಬಹುದು. ರಾಹುಲ್ ಗಾಂಧಿ ಅವರು ಕ್ಷೇತ್ರಕ್ಕೆ ಬಂದರೆ ನಮ್ಮ ಸಹಮತ ಇದ್ದೇ ಇರುತ್ತದೆ” ಎಂದು ಪರಮೇಶ್ವರ್ ಹೇಳಿದ್ದಾರೆ.
“ನಾವ್ಯಾರು ಅವರನ್ನು ಆಹ್ವಾನಿಸುವ ಅಗತ್ಯವಿಲ್ಲ. ಅವರು ಬಯಸಿದರೆ ನಾವು ಬೇಡ ಎನ್ನುತ್ತೇವೆಯೇ. ಮೀಸಲು ಕ್ಷೇತ್ರಗಳನ್ನು ಬಿಟ್ಟು ದೇಶದ ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ರಾಹುಲ್‌ಗಾಂಧಿ ಸ್ಪರ್ಧೆ ಮಾಡಬಹುದು” ಎಂದಿದ್ದಾರೆ.
Correct news