18,177.44 ಕೋಟಿ ರೂ. ಪರಿಹಾರ ಬಿಡುಗಡೆಗೆ ಮೋದಿ ಅವರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ಚರ್ಚಿಸಿದರು.

ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮೋದಿ ಅವರಲ್ಲಿ ಸಿದ್ದರಾಮಯ್ಯ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

“ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ” ಎಂದು ವಿವರಿಸಿದರು.

Advertisements

ಎನ್‌.ಡಿ.ಆರ್‌.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.

“ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ” ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಕೋರಿದ್ದಾರೆ.

ಸಿದ್ದರಾಮಯ್ಯ ಅವರ ಜೊತೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X