ಕಲಬುರಗಿ | ಅತಿಥಿ ಉಪನ್ಯಾಸಕರ ಸಮಸ್ಯೆಗಳ ಪರಿಹಾರಕ್ಕೆ ಎಐಡಿಎಸ್‌ಒ ಆಗ್ರಹ

Date:

Advertisements

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಿ, ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಬೇಕೆಂದು ಎಐಡಿಎಸ್‌ಒ ಆಗ್ರಹಿಸಿದೆ.

ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿರುವ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಪ್ರೀತಿ ದೊಡ್ಡಮನಿ, “ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅಥಿತಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಪಾಲು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ. ಒಂದೆಡೆ ತರಗತಿಗಳು ನಡೆಯುತ್ತಿಲ್ಲ ಮತ್ತು ಇನ್ನೊಂದೆಡೆ ಸೆಮಿಸ್ಟರ್ ಪರೀಕ್ಷೆಯ ದಿನಾಂಕಗಳು ಸಮೀಪಿಸುತ್ತಿವೆ. ಶೈಕ್ಷಣಿಕವಾಗಿ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿಯು ಸಾಕಷ್ಟು ಆತಂಕಕ್ಕೆ ತಳ್ಳಿದೆ” ಎಂದು ಹೇಳಿದ್ದಾರೆ.

Advertisements

“ರಾಜ್ಯ ಸರ್ಕಾರವು ಕೂಡಲೇ ಈ ಕುರಿತು ಗಮನಹರಿಸಬೇಕು. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು ಮತ್ತು ಕಾಲೇಜುಗಳಲ್ಲಿ ಪಾಠಗಳು ಸರಿಯಾಗಿ ನಡೆಯುವ ನಿಟ್ಟಿನಲ್ಲಿ ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು ಎಐಡಿಎಸ್‌ಓ ಈ ಮೂಲಕ ಕರ್ನಾಟಕ ರಾಜ್ಯ ಸರ್ಕಾರವನ್ನು ವಿನಂತಿಸುತ್ತದೆ” ಎಂದು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಸ್ನೇಹಾ ಕಟ್ಟಿಮನಿ, ತುಳಜರಾಮ ಎನ್.ಕೆ, ಪೀತಿ ದೊಡ್ಡಮನಿ, ಗೋವಿಂದ ಯಳವಾರ. ನಾಗರಾಜ ರಾವೂರ, ಜಿಲ್ಲಾ ಸಮತಿ ಸದ್ಯಸರಾದ ಯುವರಾಜ ರಾಠೋಡ, ರಾಹುಲ ಜಾಧವ. ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X