ಮೈಸೂರು | ಬಾಬು ಜಗಜೀವನ್ ರಾಮ್ ಸಮುದಾಯ ಭವನ ಲೋಕಾರ್ಪಣೆ

Date:

Advertisements

ನಂಜನಗೂಡು ತಾಲೂಕಿನ ನಂದಗುಂದಪುರ ಗ್ರಾಮದಲ್ಲಿ ನಿರ್ಮಾಣವಾಗಿರುವ ಬಾಬು ಜಗಜೀವನ್ ರಾಮ್ ಸಮುದಾಯ ಭವನವನ್ನು ಮಾಜಿ ಶಾಶಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಗ್ರಾಮದಲ್ಲಿ ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಾಣ ಮಾಡಲಾಗಿದೆ.

ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, “ವರುಣ ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ, ಕನಕ ಸಮುದಾಯ ಭವನ, ಬಸವಭವನ, ಬಾಬೂ ಜಗಜೀವನ್ ರಾಮ್ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಸಮುದಾಯ ಭವನಗಳು ಪೂರ್ಣಗೊಂಡಿವೆ” ಎಂದು ತಿಳಿಸಿದರು.

“ಇನ್ನು ಹಲವು ಸಮುದಾಯ ಭವನಗಳ ನಿರ್ಮಾಣಕ್ಕೆ ಬೇಡಿಕೆ ಇದೆ. ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಸಮುದಾಯ ಭವನಗಳನ್ನು ನಿರ್ಮಿಸಿಕೊಡಲು ಬದ್ಧರಾಗಿದ್ದೇವೆ. ಊ ಭವನಗಳನ್ನು ಸಾರ್ವಜನಿಕರು ಬಳಸಿಕೊಳ್ಳವು ಮೂಲಕ ಅಂಬೇಡ್ಕರ್, ಜಗಜೀವನ್ ರಾಮ್, ಬಸವಣ್ಣ, ಕನಕದಾಸರ ಆದರ್ಶಗಳನ್ನು ಅರಿತುಕೊಳ್ಳಬೇಕು” ಎಂದು ಹೇಳಿದರು.

Advertisements

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಗ್ರಾಮ ಪಂಚಾಯತಿ ಅಧ್ಯಕ್ಷ ನಂದೀಶ್ ಉಪಾಧ್ಯಕ್ಷ ರೇಣುಕಮ್ಮ ಗುತ್ತಿಗೆದಾರ ನಗರ‍್ಲೆ ನಾರಾಯಣ್ ನಾಯ್ಕ ಮುಖಂಡರಾದ ಶಿವಪ್ರಸಾದ್ ಲಲಿತಾದ್ರಿಪುರ ಬಸವರಾಜು ಸಿದ್ದರಾಮಯ್ಯ ಹುಂಡಿ ಮಂಜುನಾಥ್ ಚಿನ್ನಂಬಳ್ಳಿ ಸಿ ಆರ್ ಮಹದೇವ್ ಸುತ್ತೂರ್ ಸೋಮಣ್ಣ ಕುಮಾರ ಜಗದೀಶ ಮಲೆ ರಾಜನಹುಂಡಿ ಮಹದೇವು ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X