2023 ಮುಗಿದು 2024ಕ್ಕೆ ಕಾಲಿಡಲು ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ವೇಳೆ, ಮತ್ತೆ ರಾಜ್ಯಕ್ಕೆ ಮಹಾಮಾರಿ ಕೊರೋನಾ ಲಗ್ಗೆಯಿಟ್ಟಿದ್ದು, ತನ್ನ ಆರ್ಭಟ ಶುರು ಮಾಡಿದೆ. ನೆರೆಯ ರಾಜ್ಯ ಕೇರಳದಲ್ಲಿ ಈಗಾಗಲೇ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ, ಆರೋಗ್ಯ ಇಲಾಖೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಇದೀಗ, ಹೊಸ ವರ್ಷದ ಸಂಭ್ರಮದ ಹಿನ್ನೆಲೆ, ಜನರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. “ಹೊಸ ವರ್ಷಾಚರಣೆಗೆ ಪ್ರತ್ಯೇಕ ಗೈಡ್‌ಲೈನ್ಸ್ ಇರುವುದಿಲ್ಲ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
“ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಇಲ್ಲ. ಈ ಹಿನ್ನೆಲೆ, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಎಸ್‌ಎಆರ್‌ಐ, ಐಎಲ್‌ಐ ಕೇಸ್‌ಗಳ ಮೇಲೆ ಬಿಬಿಎಂಪಿ ನಿಗಾವಹಿಸಲಿದೆ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ
ಪ್ರಾಥಮಿಕ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್‌ಗಳು ಕೋವಿಡ್ ಬಗ್ಗೆ ಸಿದ್ಧತೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.