ಐಪಿಎಲ್‌ 2023 | ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಡೆಲ್ಲಿ-ಮುಂಬೈ

Date:

Advertisements

ಐಪಿಎಲ್‌ 16ನೇ ಆವೃತ್ತಿಯ 16ನೇ ಪಂದ್ಯದಲ್ಲಿ ಈ ವರ್ಷ ಆಡಿದ ಪಂದ್ಯಗಳೆಲ್ಲ ಸೋತಿರುವ ಡೆಲ್ಲಿ-ಮುಂಬೈ ತಂಡಗಳು ಮೊದಲ ಗೆಲುವಿಗಾಗಿ ಹಣಾಹಣಿ ನಡೆಸಲಿವೆ.

ಐಪಿಎಲ್‌ ಪ್ರಸಕ್ತ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಸೋಲು ಕಂಡಿರುವ ಡೇವಿಡ್‌ ವಾರ್ನರ್‌ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ತವರಿನಲ್ಲಿ ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಸವಾಲನ್ನು ಎದುರಿಸಲಿದೆ.

ಐದು ಬಾರಿಯ ಚಾಂಪಿಯನ್‌ ತಂಡ ಮುಂಬೈ ಇಂಡಿಯನ್ಸ್ , ಟೂರ್ನಿಯಲ್ಲಿ ಈವರೆಗೆ ಆಡಿದ ಎರಡು ಪಂದ್ಯಗಳಲ್ಲೂ ಸೋಲು ಕಂಡಿದೆ. ಈ ಹಿನ್ನಲೆಯಲ್ಲಿ ಡೆಲ್ಲಿ-ಮುಂಬೈ ತಂಡಗಳು ಟೂರ್ನಿಯಲ್ಲಿ ಮೊದಲ ಗೆಲುವಿಗಾಗಿ ಸೆಣಸಾಡಲಿವೆ.

Advertisements

ವಾರ್ನರ್​ ಏಕಾಂಗಿ ಹೋರಾಟ

ಡೆಲ್ಲಿ ಕ್ಯಾಪಿಟಲ್ಸ್​ ತಂಡವು ನಾಯಕ ಡೇವಿಡ್​ ವಾರ್ನರ್ ಅವರನ್ನೇ ಬಹುತೇಕ ನೆಚ್ಚಿಕೊಂಡಿದೆ. ಮೂರು ಪಂದ್ಯಗಳಲ್ಲಿ ಸೋಲು ಕಂಡಿದ್ದರೂ ಸಹ ವಾರ್ನರ್ ​ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ. ಆದರೆ, ತಂಡದ ಇತರ ಆಟಗಾರರು ಕಪ್ತಾನನಿಗೆ ಸಾಥ್​ ನೀಡುತ್ತಿಲ್ಲ. ಪೃಥ್ವಿ ಶಾ ಮತ್ತು ಲಲಿತ್ ಯಾದವ್ ಬ್ಯಾಟ್‌ನಿಂದ ಇನ್ನೂ ದೊಡ್ಡ ಇನ್ನಿಂಗ್ಸ್‌ ಮೂಡಿಬಂದಿಲ್ಲ.

ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್‌ ಅವರಂತಹ ಆಟಗಾರರನ್ನು ಹೊಂದಿದ್ದರೂ ಸಹ ಗೆಲುವಿನ ಪ್ರದರ್ಶನ ಮೂಡಿಬಂದಿಲ್ಲ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಪೂರನ್, ಸ್ಟೊಯಿನಿಸ್‌ ಸ್ಫೋಟಕ ಆಟಕ್ಕೆ ಶರಣಾದ ಆರ್‌ಸಿಬಿ; ಲಖನೌಗೆ ಮೂರನೇ ಗೆಲುವು

ಹೆಡ್-ಟು-ಹೆಡ್

ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಐಪಿಎಲ್‌ನಲ್ಲಿ 32 ಬಾರಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ ತಂಡ 17 ಬಾರಿ ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಬಾರಿ ಗೆದ್ದಿದೆ.

ಸಂಭಾವ್ಯ ತಂಡ

ಡೆಲ್ಲಿ ಕ್ಯಾಪಿಟಲ್ಸ್​: ಡೇವಿಡ್ ವಾರ್ನರ್, ಪೃಥ್ವಿ ಶಾ, ಫಿಲಿಪ್ ಸಾಲ್ಟ್/ ರಿಲೀ ರೊಸೊವ್, ಅಭಿಷೇಕ್ ಪೊರೆಲ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಅಮನ್ ಖಾನ್/ ಕಮಲೇಶ್ ನಾಗರಕೋಟಿ, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಲುಂಗಿ ಎನ್‌ಗಿಡಿ

ಮುಂಬೈ ಇಂಡಿಯನ್ಸ್​: ರೋಹಿತ್ ಶರ್ಮಾ, ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಅರ್ಷದ್ ಖಾನ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಕುಮಾರ್ ಕಾರ್ತಿಕೇಯ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

Download Eedina App Android / iOS

X